Sunday, August 17, 2025
Homeರಾಷ್ಟ್ರೀಯ | Nationalಕಾಶ್ಮೀರದಲ್ಲಿ ಮೇಘಸ್ಫೋಟಕ್ಕೆ 4 ಮಂದಿ ಬಲಿ

ಕಾಶ್ಮೀರದಲ್ಲಿ ಮೇಘಸ್ಫೋಟಕ್ಕೆ 4 ಮಂದಿ ಬಲಿ

Days after Kishtwar, cloudburst kills 4 in J&K's Kathua, houses buried

ಜಮು,ಆ.17- ಜಮು ಮತ್ತು ಕಾಶೀರದ ಕಥುವಾ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕಳೆದ ಮಧ್ಯರಾತ್ರಿಯಲ್ಲಿ ರಾಜ್‌ಬಾಗ್‌ನ ಜೋಡ್‌ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಅಪ್ಪಳಿಸಿದೆ. ಸತತ ಪ್ರಯತ್ನಗಳ ನಂತರ, ಪೊಲೀಸ್‌‍ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌‍ಡಿಆರ್‌ಎಫ್‌) ಜಂಟಿ ತಂಡವು ಘಟನಾ ಸ್ಥಳಕ್ಕೆ ತಲುಪಿ ಸ್ಥಳೀಯ ಸ್ವಯಂಸೇವಕರೊಂದಿಗೆ ರಕ್ಷಣಾ ಕಾರ್ಯ ನಡೆಸಿದೆ.

ಇಲ್ಲಿಯವರೆಗೆ, ನಾಲ್ವರ ಶವಗಳನ್ನು ಹೊರತೆಗೆಯಲಾಗಿದ್ದು, ಆರು ಮಂದಿ ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಲಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕಥುವಾ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ಬಗಾರ್ಡ್‌ ಮತ್ತು ಚಂಗ್ಡಾ ಗ್ರಾಮಗಳು ಮತ್ತು ಲಖನ್‌ಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯ ದಿಲ್ವಾನ್‌-ಹಟ್ಲಿ ಗ್ರಾಮಗಳಲ್ಲೂ ಭೂಕುಸಿತ ಸಂಭವಿಸಿದೆ ಆದರೆ ಹೆಚ್ಚಿನ ಹಾನಿಯ ವರದಿಯಾಗಿಲ್ಲ. ಭಾರೀ ಮಳೆಯಿಂದಾಗಿ ಉಜ್‌ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದ್ದು, ಬಹುತೇಕ ಜಲಮೂಲಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ಕಿಶ್ತ್ವಾರ್‌ನಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಕೆಲವು ದಿನಗಳ ನಂತರ, ಜಮ್ಮು ಮತ್ತು ಕಾಶೀರದ ಕಥುವಾ ಜಿಲ್ಲೆಯ ದೂರದ ಹಳ್ಳಿಯಲ್ಲಿ ಮೇಘಸ್ಫೋಟ ಸಂಭವಿಸಿ ಕನಿಷ್ಠ ಪಕ್ಷ ನಾಲ್ಕು ಜನ ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿದ್ದಾರೆ. ಘಾಟಿ ಪ್ರದೇಶದಲ್ಲಿ ಹಲವಾರು ಮನೆಗಳು ಅವಶೇಷಗಳು ಮತ್ತು ಪ್ರವಾಹದ ನೀರಿನಲ್ಲಿ ಹೂತುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮು-ಪಠಾಣ್‌‍ಕೋಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಭಾರೀ ಮಳೆಯಿಂದಾಗಿ ಹೆಚ್ಚಿನ ಜಲಮೂಲಗಳಲ್ಲಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದ್ದು, ಉಜ್‌ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸುರಕ್ಷತೆಗಾಗಿ ಜನರು ಜಲಮೂಲಗಳಿಂದ ದೂರವಿರುವಂತೆ ವಿನಂತಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ. ಜೋಧ್‌ ಖಾದ್‌ ಮತ್ತು ಜುಥಾನಾ ಸೇರಿದಂತೆ ಕಥುವಾ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭೂಕುಸಿತದಿಂದ 4 ಜನರು ಸಾವನ್ನಪ್ಪಿ, ಅನೇಕರು ಗಾಯಗೊಂಡ ಘಟನೆಗೆ ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ಅವರು ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ ಮತ್ತು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಲೆಫ್ಟಿನೆಂಟ್‌ ಗೌರ್ನರ್‌ ಮನೋಜ್‌ ಸಿನ್ಹಾ, ಸಂತ್ರಸ್ತ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು. ಕಥುವಾದ ಹಲವಾರು ಪ್ರದೇಶಗಳಲ್ಲಿ ಮಳೆಯಿಂದ ಉಂಟಾದ ಭೀಕರ ಭೂಕುಸಿತಗಳಲ್ಲಿ ಜೀವಹಾನಿಯಾಗಿದ್ದರಿಂದ ತೀವ್ರ ದುಃಖವಾಗಿದೆ. ಈ ದುರಂತ ಮನಸ್ಸನ್ನು ಮುದಗೊಳಿಸುವಂತಿದೆ. ಸೇನೆ, ಎನ್‌ಡಿಆರ್‌ಎಫ್‌, ಎಸ್‌‍ಡಿಆರ್‌ಎಫ್‌, ಪೊಲೀಸ್‌‍ ಮತ್ತು ಆಡಳಿತದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ವಿವರಿಸಲಾಗಿದೆ, ಎಂದು ಅವರು ಎಕ್‌್ಸನಲ್ಲಿ ಬರೆದಿದ್ದಾರೆ.

ಹಿರಿಯ ನಾಗರಿಕ ಮತ್ತು ಪೊಲೀಸ್‌‍ ಅಧಿಕಾರಿಗಳಿಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ನೆರವು ಪ್ರಯತ್ನಗಳನ್ನು ಸಂಘಟಿಸಲು ಮತ್ತು ಕಾರ್ಯಗತಗೊಳಿಸಲು ಮತ್ತು ಸ್ಥಳದಲ್ಲೇ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ನಾನು ನಿರ್ದೇಶನ ನೀಡಿದ್ದೇನೆ. ನನ್ನ ಸಂತಾಪಗಳು ದುಃಖಿತ ಕುಟುಂಬಗಳೊಂದಿಗೆ ಇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು.

RELATED ARTICLES

Latest News