Homeರಾಜ್ಯಯಾಕೆ ಐಟಿ-ಬಿಟಿ ಕಂಪನಿಗಳು ಕಲಬುರಗಿ ಏಕೆ ಕಾಲಿಟ್ಟಿಲ್ಲ..? : ಪ್ರಿಯಾಂಕ್‌ ಖರ್ಗೆಗೆ ವಿಜಯೇಂದ್ರ ತಿರುಗೇಟು

ಯಾಕೆ ಐಟಿ-ಬಿಟಿ ಕಂಪನಿಗಳು ಕಲಬುರಗಿ ಏಕೆ ಕಾಲಿಟ್ಟಿಲ್ಲ..? : ಪ್ರಿಯಾಂಕ್‌ ಖರ್ಗೆಗೆ ವಿಜಯೇಂದ್ರ ತಿರುಗೇಟು

Vijayendra hits back at Priyank Kharge

ಬೆಂಗಳೂರು,ಫೆ.16- ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನಹರಿಸಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ.

ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ, ವಾಸ್ತವ ನೆಲೆಗಟ್ಟಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ನೋಡಲಿ. ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, ಖಿ-ಃಖಿ ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್‌ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಂತಹ ನಮ ಹೆಮೆಯ ಕರಾವಳಿ ಜಿಲ್ಲೆಗಳ ಕುರಿತು, ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ.

ರಾಜ್ಯದ ಹಿತ ಕಾಯಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು, ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೇ ಅಲ್ಲ, ತಮ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ನಿಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್‌ ಸಮಿತಿ ವರದಿಯೇ ನಿಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಅತೀ ಹಿಂದುಳಿದ ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ.

ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ ಎಂದು ಹೇಳಿದ್ದಾರೆ.

ಮುಖ್ಯವಾಗಿ, ಕಳೆದ ಆರು ದಶಕಗಳಿಂದ ಮಾನ್ಯ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನೊಮೆ ನೋಡಿ ನಂತರ ಕರಾವಳಿ ಬಗ್ಗೆ ಮಾತನಾಡಿ. ಸತತವಾಗಿ ಒಂದಿಲ್ಲೊಂದು ಅಧಿಕಾರವನ್ನು ನಿಮ ಕುಟುಂಬಕ್ಕೆ ಜನರು ನೀಡಿದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವ ಸ್ಥಾನಗಳು, ಸಂಸದರು, ಶಾಸಕರು ಎಲ್ಲವೂ ಆಗಿದ್ದರೂ, ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು, ಕರಾವಳಿಯನ್ನು ಟೀಕಿಸುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.

ಕಲಬುರಗಿ ಇಂದಿಗೂ ಯಾಕೆ ಹಿಂದುಳಿದಿದೆ, ನಿಮನ್ನು ನಂಬಿದ ಜನರನ್ನು ಇನ್ನೂ ಹಿಂದುಳಿಯಲು ಬಿಟ್ಟಿದ್ದು ಯಾಕೆ ಎನ್ನುವುದನ್ನು ಮೊದಲು ಹೇಳಿ. ಅಲ್ಲಿ ಯಾಕೆ ಐಟಿ ಬಿಟಿ ಬಂಡವಾಳ ಹಾಕುವಂತೆ ಮಾಡುವುದು ತಮಗೆ ಸಾಧ್ಯವಾಗಿಲ್ಲ? ಮೊದಲು ಅದರ ಬಗ್ಗೆ ಮಾತನಾಡಿ. ನಿಮ್ಮ ತವರು ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಇಂದಿಗೂ ಪರದಾಡುತ್ತಿದ್ದಾರೆ, ಕುಡಿಯುವ ನೀರಿಗೂ ಹಾಹಾಕಾರವಿದೆ.

ಮೊದಲು ನಿಮ ಮನೆಯಂಗಳದ ಕತ್ತಲೆಯನ್ನು ಹೋಗಲಾಡಿಸಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡಿ. ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮನೆ ಅದನ್ನು ಕೆಣಕುವ ಬದಲು, ನಿಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ವಿಜಯೇಂದ್ರ ವ್ಯಂಗ್ಯಭರಿತ ಸಲಹೆ ನೀಡಿದ್ದಾರೆ.

RELATED ARTICLES

Latest News