Tuesday, August 19, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಹಾಸನ : ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ : ರೈಲಿಗೆ ತಲೆಕೊಟ್ಟು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Hassan: Medical student commits suicide by jumping in front of train

ಹಾಸನ,ಆ.19-ನಗರದ ಡೈರಿ ಸರ್ಕಲ್‌ ಬಳಿಯ ರೈಲ್ವೆ ಹಳಿಯಲ್ಲಿ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿದ್ದಾನೆ.ಆತಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಹರಿಯಾಣ ಮೂಲದ ಓಷರ್‌ಸಿಂಗ್‌ (19) ಎಂದು ಗುರುತಿಸಲಾಗಿದೆ.

ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಓಷರ್‌ಸಿಂಗ್‌, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ.ಘಟನೆಗೆ ಮುನ್ನ ಆತ ತನ್ನ ಸ್ನೇಹಿತನೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾನೆ. ನಂತರ ರೈಲ್ವೆ ಹಳಿಯಲ್ಲಿ ಮಲಗಿ ಆತಹತ್ಯೆ ಮಾಡಿಕೊಂಡಿದ್ದಾನೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ.

RELATED ARTICLES

Latest News