Thursday, August 21, 2025
Homeರಾಜ್ಯಮೃತ ಕೆಎಸ್‌‍ಆರ್‌ಟಿಸಿ ನೌಕರರ ಕುಟುಂಬಕ್ಕೆ ಅಪಘಾತೇತರ ಪರಿಹಾರ ಹೆಚ್ಚಳ

ಮೃತ ಕೆಎಸ್‌‍ಆರ್‌ಟಿಸಿ ನೌಕರರ ಕುಟುಂಬಕ್ಕೆ ಅಪಘಾತೇತರ ಪರಿಹಾರ ಹೆಚ್ಚಳ

Non-accidental compensation increased for families of deceased KSRTC employees

ಬೆಂಗಳೂರು,ಆ.20-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮರಣ ಹೊಂದಿದ್ದಲ್ಲಿ, ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್‌‍ಆರ್‌ಟಿಸಿ, ಮೃತ ನೌಕರರ ಅವಲಂಬಿತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಸೆ.1 ರಿಂದ ಜಾರಿಗೆ ಬರುವಂತೆ ನಿಗಮದ ವತಿಯಿಂದ ನೀಡಲಾಗುತ್ತಿರುವ 10 ಲಕ್ಷ ರೂ. ಪರಿಹಾರದ ಮೊತ್ತವನ್ನು 14 ಲಕ್ಷ ರೂ. ಗಳಿಗೆ ಹೆಚ್ಚಸಿ ಪರಿಷ್ಕರಿಸಲಾಗಿದೆ.

ಇದರೊಂದಿಗೆ 6 ಲಕ್ಷ ರೂ. ಎಸ್‌‍ಬಿಐ ಬ್ಯಾಂಕ್‌ನಿಂದ ನೀಡಲಾಗುತ್ತಿದ್ದು, ಮೃತ ನೌಕರರ ಕುಟುಂಬಕ್ಕೆ ಒಟ್ಟು 20 ಲಕ್ಷ ರೂ. ಮೊತ್ತದ ಪರಿಹಾರ ನೀಡಲಾಗುವುದು.
ಕರ್ತವ್ಯದಲ್ಲಿದ್ದಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿದೆ.

ಇದೇ ಮೊದಲ ಭಾರಿಗೆ ಸ್ಟೇಟ್‌ ಬ್ಯಾಂಕ್‌ ಇಂಡಿಯಾದಿಂದ ಅಪಘಾತ ಹೊರತು ಪಡಿಸಿ ಇತರೆ ಪ್ರಕರಣಗಳಲ್ಲಿ ಮೃತ ಪಟ್ಟರೆ 6 ಲಕ್ಷ ರೂ. ಪರಿಹಾರ ಮೊತ್ತ ನೀಡಲಾಗುತ್ತದೆ.ನಿಗಮದ ನೌಕರರು ಅಪಘಾತ ಹೊರತುಪಡಿಸಿ ಹೃದಯಾಘಾತ, ಕ್ಯಾನ್ಸರ್‌,ಕಿಡ್ನಿ ಸಮಸ್ಯೆ ಅಥವಾ ಇತರೆ ಕಾರಣಗಳಿಂದ ಮೃತಪಟ್ಟಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷಗಳಿಗೆ ಹೆಚ್ಚಿಸಿ 2023ರ ಅ.1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.ಅದರಂತೆ ಇದುವರೆಗೆ 157ಮೃತ ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ.

RELATED ARTICLES

Latest News