ನವದೆಹಲಿ,ನ.23- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಯೋಧ್ಯ ರಾಮಮಂದಿರ ನಿರ್ಮಾಣ ಕಾರ್ಯವನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಈಗಾಗಲೇ ಬಿಜೆಪಿ ಲೆಕ್ಕಾಚಾರ ಹಾಕಿದೆ. 2024ರ ಲೋಕಸಭೆ ಚುನಾವಣೆಯ ಮೇಲೆ ಬಿಜೆಪಿ ಕಣ್ಣು ಹಾಕಿದ್ದು, ಐದು ರಾಜ್ಯಗಳಲ್ಲಿ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ, ರಾಮ ಮಂದಿರದ ರಾಜಕೀಯ ಲಾಭವನ್ನು ಪಡೆಯುವ ಸಾಹಸಕ್ಕೆ ಕೈ ಹಾಕಿದೆ.
ಜನವರಿಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರವನ್ನು ರಾಜಕೀಯ ದಾಳವನ್ನಾಗಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ತನ್ನ ಅಧಿಕೃತ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪಕ್ಷವು ಅಯೋಧ್ಯೆಯಲ್ಲಿ ಮುಂಬರುವ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾವನ್ನು ತೋರಿಸುವ ಹೊಸ ಬ್ಯಾನರ್ ಚಿತ್ರವನ್ನು ಪೋಸ್ಟ್ ಮಾಡಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ
ಜೈ ಶ್ರೀ ರಾಮ, ಜನವರಿ 22, 2024 ಎಂದಿರುವ ಬ್ಯಾನರ್ ಚಿತ್ರದ ಅಡಿಬರಹವನ್ನು ನೇರವಾಗಿ ಅಯೋಧ್ಯೆಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶಾದ್ಯಂತದ ಸಾವಿರಾರು ಸಂತರು ಉಲ್ಲೇಖಿಸಿದ್ದಾರೆ.