ತಿರುವಂತನಪುರಂ,ಆ.22– ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ಟ್ರಾನ್ಸ್ ಜೆಂಡರ್(ಲಿಂಗಪರಿವರ್ತನೆ) ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.
ಮಮ್ಕೂಟತಿಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಮೇಲೆ ಅತ್ಯಾಚಾರ ಮಾಡಬೇಕೆಂದು ಹೇಳಿದ್ದರಿಂದ ಅವನು ಲೈಂಗಿಕವಾಗಿ ಹತಾಶೆಗೊಂಡಿದ್ದಾನೆ ಎಂದು ನಾನು ಭಾವಿಸುತ್ತೇನೆ. ಬೆಂಗಳೂರು ಅಥವಾ ಹೈದರಾಬಾದ್ಗೆ ಹೋಗಿ ಅದನ್ನು ಪರಿಶೀಲನೆ ಮಾಡಬಹದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚುನಾವಣಾ ಚರ್ಚೆಯ ಸಮಯದಲ್ಲಿ ಅವರು ಮೊದಲು ಭೇಟಿಯಾದರು. ಸಾಮಾನ್ಯ ಸ್ನೇಹವಾಗಿ ಪ್ರಾರಂಭವಾದದ್ದು ಸಾಮಾಜಿಕ ಮಾಧ್ಯಮದಲ್ಲಿನ ಸಂದೇಶಗಳ ಮೂಲಕ ಅಸಹ್ಯಕರ ಅನುಭವವಾಗಿ ಬದಲಾಯಿತು ಎಂದು ಅವಂತಿಕಾ ಹೇಳಿದರು.
ಮಲಯಾಳಂ ನಟಿ ರಿನಿ ಆನ್ ಜಾರ್ಜ್ ಮತ್ತು ನಂತರ ಬರಹಗಾರ ಹನಿ ಭಾಸ್ಕರನ್ ಅವರು ನೀಡಿದ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಮ್ಕೂಟತಿಲ್ ಕೇರಳ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕಿಯೊಬ್ಬರು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ಗೆ ಆಹ್ವಾನಿಸಿದ್ದಾರೆ ಎಂದು ರಿನಿ ಆರೋಪಿಸಿದ್ದರು. ಅವರು ಯಾರನ್ನೂ ಹೆಸರಿಸದಿದ್ದರೂ, ಬಿಜೆಪಿ ಮತ್ತು ಡಿವೈಎಫ್ಐ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಮ್ಕೂಟತಿಲ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ಹನಿ ಭಾಸ್ಕರನ್, ಮಾಮ್ಕೂಟತಿಲ್ ಅವರನ್ನು ಹೆಸರಿಸಿ, ಪದೇ ಪದೇ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಅವರ ಸಂಭಾಷಣೆಗಳನ್ನು ತಪ್ಪಾಗಿ ನಿರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಯುವ ಕಾಂಗ್ರೆಸ್ನೊಳಗಿನ ದೂರುಗಳು ಬಗೆಹರಿಯದೆ ಉಳಿದಿವೆ ಎಂದು ಹೇಳಿದರು.
ತಮ ರಾಜೀನಾಮೆಯಲ್ಲಿ, ಮಮ್ಕೂಟತಿಲ್ ಅವರು ತಾವು ರಾಜೀನಾಮೆ ನೀಡುತ್ತಿರುವುದು ತಪ್ಪು ಕಾರಣದಿಂದಲ್ಲ, ಬದಲಾಗಿ ಪಕ್ಷದ ಕಾರ್ಯಕರ್ತರು ಮುಂಬರುವ ಚುನಾವಣೆಗಳತ್ತ ಗಮನಹರಿಸಲು ಅವಕಾಶ ನೀಡುವ ಉದ್ದೇಶದಿಂದ ಎಂದು ಹೇಳಿದ್ದಾರೆ. ಪಕ್ಷದ ಯಾವುದೇ ನಾಯಕರು ರಾಜೀನಾಮೆ ನೀಡುವಂತೆ ತಮನ್ನು ಕೇಳಿಲ್ಲ ಎಂದು ಅವರು ಒತ್ತಿ ಹೇಳಿದರು ಮತ್ತು ಅದು ತಮ ವೈಯಕ್ತಿಕ ಜವಾಬ್ದಾರಿ ಎಂದು ಹೇಳಿದರು.
ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ ಕೇರಳ ಸಚಿವೆ ಆರ್ ಬಿಂದು, ಯುವ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ಅನೇಕ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ತುರ್ತು. ಅವರು ಯುವ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಮಾಜವನ್ನು ರಕ್ಷಿಸಲು ಅವರು ಶಾಸಕ ಸ್ಥಾನದಿಂದ ಕೆಳಗಿಳಿಯುವುದು ಮುಖ್ಯ ಎಂದು ಹೇಳಿದರು.
- ಕರ್ನಾಟಕ ಸಹಕಾರಿ ಪಾರದರ್ಶಕ ವಿಧೇಯಕಕ್ಕೆ ವಿಧಾನಪರಿಷತ್ನಲ್ಲಿ ಮರು ಅಂಗೀಕಾರ
- ಆರ್ಸಿಬಿ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸಿದ್ದರೆ ಬಿಜೆಪಿಯಿಂದ ದೊಡ್ಡ ಚಳವಳಿಯೇ ನಡೆಯುತ್ತಿತ್ತು : ಸಿಎಂ
- ಛತ್ತೀಸ್ಗಢ : ತ್ರಿವರ್ಣ ಧ್ವಜ ಹಾರಿಸಿದ್ದ ವ್ಯಕ್ತಿಯನ್ನು ಕೊಂದ ನಕ್ಸಲರು
- ಅಮೆರಿಕದ ಡ್ರೇಕ್ ಪ್ಯಾಸೇಜ್ ಪ್ರದೇಶದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
- ಶೇ.5.5 ರಷ್ಟು ಶುಲ್ಕದೊಂದಿಗೆ ಬೆಂಗಳೂರಿನಲ್ಲಿರುವ ‘ಬಿ’ ಖಾತೆಗಳನ್ನು ‘ಎ’ ಖಾತೆಗಳಾಗಿ ಪರಿವರ್ತನೆ : ಡಿಕೆಶಿ