ಬೆಂಗಳೂರು,ಆ.22- ಮಹೇಶ್‌ಶೆಟ್ಟಿ ತಿಮರೋಡಿಯವರನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು.
ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಪ್ರಕರಣದಲ್ಲಿ ಮಹೇಶ್‌ಶೆಟ್ಟಿಯವರನ್ನು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಅವರ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಹೋದಾಗ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ 25 ಕ್ಕೂ ಹೆಚ್ಚು ಮಂದಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.
ಹಾಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಸೇರಿದಂತೆ 30 ಮಂದಿ ವಿರುದ್ಧ ಬ್ರಹ್ಮಾವರ ಠಾಣೆ ಸಬ್ ಇನ್‌್ಸಪೆಕ್ಟರ್ ಅಶೋಕ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಎ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟಣ್ಣನವರ್‌ಗೆ ಸೂಚಿಸಿದ್ದರ ಹಿನ್ನೆಲೆಯಲ್ಲಿ ಇಂದು ಅವರು ವಿಚಾರಣೆಗೆ ಹಾಜರಾದರು.
- ಎಲ್ಪಿಜಿ ಟ್ಯಾಂಕ್ ಸ್ಫೋಟಗೊಂಡು 7 ಮಂದಿ ಸಜೀವ ದಹನ
- ಬೈಕ್ಗೆ ಕಾರು ಡಿಕ್ಕಿಯಾಗಿ ಸೇತುವೆಯಿಂದ ಬಿದ್ದು ಮಹಿಳೆ ಸಾವು
- ವಾಯು ರಕ್ಷಣಾ ಶಸ್ತ್ರಾಸ್ತ್ರ ಹಾರಾಟ ಪರೀಕ್ಷೆ ಯಶಸ್ವಿ
- ಮನೆಯಲ್ಲೇ ಎಸ್ಐಟಿಯಿಂದ ಸುಜಾತ ಭಟ್ ವಿಚಾರಣೆ
- ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ