ಪುಣೆ, ಆ.25- ಯಕೃತ್ತು ಕಸಿ ಶಸ್ತ್ರಚಿಕಿತ್ಸೆಯ ನಂತರ ದಂಪತಿಗಳು ಸಾವನ್ನಪ್ಪಿರುವ ಘಟನೆ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಆರೋಗ್ಯಇಲಾಖೆ ಆಸ್ಪತ್ರೆಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಕೃತ್ತಿನ ಸಮಸ್ಯಯಿಂದ ಬಳಲುತ್ತಿದ್ದ ಪತಿಗೆ ಪತ್ನಿ ಯಕೃತ್ತಿನ ಒಂದು ಭಾಗವನ್ನುದಾನ ಮಾಡಿದ್ದರು.
ಸಹ್ಯಾದ್ರಿ ಆಸ್ಪತ್ರೆಯಲ್ಲಿ ಕಸಿ ಶಸ್ತ್ರಚಿಕಿತ್ಸೆಯ ನಂತರ ಕೆಲವು ದಿನಗಳಲೇ ದಂಪತಿ ನಿಧನರಾದರುಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಕಸಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಕೂಡಲೆ ಸಲ್ಲಿಸುವಂತೆ ಆಸ್ಪತ್ರೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸೇವೆಗಳ ಉಪ ನಿರ್ದೇಶಕ ಡಾ. ನಾಗನಾಥ್ ಯೆಂಪಲ್ಲೆ ತಿಳಿಸಿದ್ದಾರೆ.
ರೋಗಿಯನ್ನು ಬಾಪು ಕೊಮ್ಕರ್ ಎಂದು ಗುರುತಿಸಲಾಗಿದ್ದು ಅವರ ಪತ್ನಿ ಕಾಮಿನಿ, ತಮ ಯಕೃತ್ತಿನ ಒಂದು ಭಾಗವನ್ನು ದಾನ ಮಾಡಿದರು, ಅವರಿಗೆ ಆಗಸ್ಟ್ 15 ರಂದು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಮಾಡಲಾಯಿತು.
ಕಸಿ ಶಸ್ತ್ರಚಿಕಿತ್ಸೆಯ ನಂತರ ಬಾಪು ಕೊಮ್ಕರ್ ಅವರ ಆರೋಗ್ಯ ಹದಗೆಟ್ಟಿತು ಮತ್ತು ಅವರು ಆಗಸ್ಟ್ 17 ರಂದು ನಿಧನರಾದರು. ಕಾಮಿನಿಗೆ ಆಗಸ್ಟ್ 21 ರಂದು ಸೋಂಕು ತಗುಲಿ ಚಿಕಿತ್ಸೆಯ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ.ವೈದ್ಯಕೀಯ ನಿರ್ಲಕ್ಷ್ಯವನ್ನು ಆರೋಪಿಸಿ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಅವರ ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ. ಶಸ್ತ್ರಚಿಕಿತ್ಸಾಮಾನದಂಡಗಳ ಪ್ರಕಾರ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಶಸ್ತ್ರಚಿಕಿತ್ಸಾ ಅಪಾಯಗಳ ಬಗ್ಗೆ ಕುಟುಂಬ ಮತ್ತು ದಾನಿಗೆ ಮುಂಚಿತವಾಗಿ ಸಂಪೂರ್ಣ ಸಮಾಲೋಚನೆ ನಡೆಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.ಶಸ್ತ್ರಚಿಕಿತ್ಸೆಗಳನ್ನು ಪ್ರಮಾಣಿತ ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸಿ ನಡೆಸಲಾಯಿತು. ದುರದೃಷ್ಟವಶಾತ್, ಸ್ವೀಕರಿಸುವವರಿಗೆ ಕಸಿ ನಂತರ ಕಾರ್ಡಿಯೋಜೆನಿಕ್ ಆಘಾತ ಉಂಟಾಯಿತು ಮತ್ತು ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಎಂದು ಅದು ಹೇಳಿದೆ.
- ಬೆಂಗಳೂರಲ್ಲಿ ಅನಧಿಕೃತ ಪಾರ್ಕಿಂಗ್ ಮಾಡಿದ 12 ಸಾವಿರ ವಾಹನ ಸವಾರರ ವಿರುದ್ಧ ಎಫ್ಐಆರ್
- ಶೇ.50 ರಷ್ಟು ರಿಯಾಯಿತಿ ಹಿನ್ನೆಲೆಯಲ್ಲಿ ಮುಗಿಬಿದ್ದು ದಂಡ ಕಟ್ಟಿದ ವಾಹನ ಸವಾರರು
- ಶಾಂತಿಯುತ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸೂಕ್ತ ಭದ್ರತೆ : ಆಯುಕ್ತರು
- ಸೆ.1ರಿಂದ ಬಿಜೆಪಿ ‘ಧರ್ಮಸ್ಥಳ ಚಲೋ’
- ಯೂಟ್ಯೂಬರ್ ಸಮೀರ್ ಲ್ಯಾಪ್ಟಾಪ್, ಮೊಬೈಲ್ ಜಪ್ತಿ ಸಾಧ್ಯತೆ