Tuesday, August 26, 2025
Homeಬೆಂಗಳೂರುಶಾಂತಿಯುತ ಗೌರಿ-ಗಣೇಶ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಆಚರಣೆಗೆ ಸೂಕ್ತ ಭದ್ರತೆ : ಆಯುಕ್ತರು

ಶಾಂತಿಯುತ ಗೌರಿ-ಗಣೇಶ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಆಚರಣೆಗೆ ಸೂಕ್ತ ಭದ್ರತೆ : ಆಯುಕ್ತರು

Adequate security for peaceful Gauri-Ganesh and Eid Milad celebrations: Commissioner

ಬೆಂಗಳೂರು,ಆ.25- ಗೌರಿ-ಗಣೇಶ ಹಾಗೂ ಈದ್‌ ಮಿಲಾದ್‌ ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಯಾವ ರೀತಿ ಭದ್ರತೆ ಕೈಗೊಳ್ಳಬೇಕೆಂಬ ಬಗ್ಗೆ ನಗರ ಪೊಲೀಸ್‌‍ ಆಯುಕ್ತರಾದ ಸೀಮಂತ್‌ಕುಮಾರ್‌ ಸಿಂಗ್‌ ಅವರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ.

ಆಯುಕ್ತರ ಕಚೇರಿಯಲ್ಲಿನ ಸಭಾಂಗಣದಲ್ಲಿಂದು ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ ಅವರು, ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ಸಂದರ್ಭಗಳಲ್ಲಿ ಯಾವ ರೀತಿಯಲ್ಲಿ ಭದ್ರತೆ ಕೈಗೊಳ್ಳಬೇಕೆಂಬ ಬಗ್ಗೆ ವಿವರವಾಗಿ ತಿಳಿಸಿದರು.

ಯಾವುದೇ ಕಾರಣಕ್ಕೂ ಸಣ್ಣಪುಟ್ಟ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಯಾವುದೇ ಸಣ್ಣ ಘಟನೆ ನಡೆದರೂ ತಕ್ಷಣ ಇನ್‌್ಸಪೆಕ್ಟರ್‌ ಸ್ಥಳಕ್ಕೆ ತೆರಳಿ ಅದನ್ನು ಬಗೆಹರಿಸಬೇಕು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳ ಬಳಿ ಪೊಲೀಸರನ್ನು ನಿಯೋಜಿಸಿ, ಆಯೋಜಕರೊಂದಿಗೆ ಸಂಪರ್ಕ ದಲ್ಲಿರುವಂತೆ ಅವರು ಸೂಚಿಸಿದರು. ಸೂಕ್ಷ್ಮ ಸ್ಥಳಗಳಲ್ಲಿ ಅಗ್ನಿ ಶಾಮಕ ವಾಹನಗಳೊಂದಿಗೆ ಸಿಬ್ಬಂದಿಗಳನ್ನು ಕೆಲವು ಪ್ರದೇಶಗಳಲ್ಲಿ ಕಾಯ್ದಿರಿಸಿಕೊಳ್ಳಿ.

ಬೆಸ್ಕಾಂ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರಿ, ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನ ಸ್ಥಳದಲ್ಲಿ ಯಾವುದಾದರೂ ಘಟನೆಗಳು ನಡೆದಿದ್ದರೆ ಅಂತಹ ಸ್ಥಳಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಅವರು ಸಲಹೆ ನೀಡಿದರು.ಒಟ್ಟಾರೆ ನಗರದಲ್ಲಿ ಯಾವುದೇ ರೀತಿಯ ಸಣ್ಣಪುಟ್ಟ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಅದೇ ರೀತಿ ಈದ್‌ ಮಿಲಾದ್‌ ಹಬ್ಬದ ಸಂದರ್ಭದಲ್ಲೂ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ಮಾಡ ಬೇಕು. ಯಾವುದೇ ಗಲಭೆಗಳಿಗೆ ಅವಕಾಶ ಕೊಡಬೇಡಿ. ಯಾವುದೇ ಸಣ್ಣ ಘಟನೆ ನಡೆದರೂ ಸಹ ಪ್ರಾರಂಭದಲ್ಲೇ ಬಗೆಹರಿಸಿ ಇತ್ಯರ್ಥ ಪಡಿಸುವಂತೆ ಅವರು ಸೂಚಿಸಿದರು.ಸಭೆಯಲ್ಲಿ ನಗರದ ಎಲ್ಲಾ ವಿಭಾಗಗಳ ಎಸಿಪಿಗಳು, ಡಿಸಿಪಿಗಳು, ಜಂಟಿ ಪೊಲೀಸ್‌‍ ಆಯುಕ್ತರು, ಹೆಚ್ಚುವರಿ ಕಮಿಷನರ್‌ಗಳು ಉಪಸ್ಥಿತರಿದ್ದರು.

RELATED ARTICLES

Latest News