Friday, November 22, 2024
Homeರಾಜಕೀಯ | Politicsನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ

ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ

ಬೆಂಗಳೂರು,ನ.23- ಏನೇ ಅಸಮಾಧಾನವಿದ್ದರೂ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಎಲ್ಲ ಹಂತದಲ್ಲೂ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಸಹಕಾರ ನೀಡುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಲಾಗುವುದು. ವರಿಷ್ಠರ ತೀರ್ಮಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದಕ್ಕೆ ನಾನು ಕೂಡ ಹೊರತಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವು ತೀರ್ಮಾನಗಳಿಂದ ಬೇಸರವಾಗಿದ್ದು ನಿಜ. ಇದನ್ನೇ ವಿವಾದ ಮಾಡಿದರೆ ಪ್ರತಿಪಕ್ಷಗಳಿಗೆ ಇದು ಅಸ್ತ್ರವಾಗಲಿದೆ. ಬರುವ ದಿನಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಕೊಡಬಾರದು. ಇನ್ನು ಮುಂದೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದೇವೆ ಎಂದು ಆಶ್ವಾಸನೆ ನೀಡಿದರು.

ಬುಧವಾರ ನಾನು ಮಾಜಿ ಸಚಿವರಾದ ವಿ.ಸುನೀಲ್‍ಕುಮಾರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಮನೆಯಲ್ಲೇ ಸಭೆ ಸೇರಿ ಪಕ್ಷದ ಬೆಳವಣಿಗೆ ಕುರಿತಂತೆ ಮಾತುಕತೆ ನಡೆಸಿದ್ದೇವೆ. ಅಸಮಾಧಾನವೆಂಬುದು ಮುಗಿದ ಅಧ್ಯಾಯ, ವಿಜಯೇಂದ್ರ ಇನ್ನು ಮುಂದೆ ನಮ್ಮ ಹುಡುಗ. ಅವರಿಗೆ ಸಹಕಾರ ನೀಡಲಿದ್ದೇವೆ ಎಂದು ವಿವರಿಸಿದರು.

ಮರಾಠ ಮೀಸಲಾತಿಗೆ ನಾವು ಬದ್ಧ : ದೇವೇಂದ್ರ ಫಡ್ನವಿಸ್

ದೇಶದಲ್ಲಿ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಿ ಮುಂದುವರೆಯಬೇಕು. ಇದಕ್ಕೆ ಕರ್ನಾಟಕದಿಂದಲೂ ನಾವು ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನೆಯಾಗುತ್ತದೆ. ಕೇವಲ ವಿಜಯೇಂದ್ರ ಒಬ್ಬರೇ ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಲು ವಿಜಯೇಂದ್ರಗೆ ಸಲಹೆ ಕೊಟ್ಟಿದ್ದೇನೆ. ಅವರು ಎಲ್ಲವನ್ನು ಸಹನೆಯಿಂದ ಕೇಳಿದ್ದಾರೆ. ಬರುವ ದಿನಗಳಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಒಳ್ಳೆಯ ದಿನಗಳು ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

RELATED ARTICLES

Latest News