Thursday, August 28, 2025
Homeರಾಜ್ಯಚಾರ್ಮುಡಿ ಘಾಟ್‌ನಲ್ಲಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ

ಚಾರ್ಮುಡಿ ಘಾಟ್‌ನಲ್ಲಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ

New rules for vehicles in Charmudi Ghat

ಚಿಕ್ಕಮಗಳೂರು,ಆ.28– ಕರಾವಳಿ ಸಂಪರ್ಕಿಸುವ ಚಾರ್ಮುಡಿ ಘಾಟ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.

ಇನ್ನು ಮುಂದೆ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಚಾರ್ಮಡಿಘಾಟ್‌ನಲ್ಲಿ ಕನಿಷ್ಠ ಐದು ವಾಹನಗಳು ಸೇರಿದಾಗ ಮಾತ್ರ ಪ್ರವೇಶ ಸಿಗಲಿದೆ. ಒಂದು ಎರಡು ವಾಹನಗಳು ಕಡ್ಡಾಯವಾಗಿ ಚಾರ್ಮುಡಿಘಾಟ್‌ ನಲ್ಲಿ ಸಂಚರಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ರಾತ್ರಿ ವೇಳೆ ಚೆಕ್‌ಪೋಸ್ಟ್‌ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಐದು ವಾಹನಗಳು ಒಟ್ಟಾಗಿ ಹೊರಡುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ದಟ್ಟ ಅರಣ್ಯದಿಂದ ಸುತ್ತುವರಿದ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು ಇದಕ್ಕೆ ಬ್ರೇಕ್‌ ಹಾಕಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಗೇಟ್‌ ಮುಚ್ಚಿರಲಿದೆ, ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ ಮೂಲಕ ಹಾದುಹೋಗುವ ಎಲ್ಲಾ ವಾಹನಗಳು ಸಿಸಿಟಿವಿಯಲ್ಲಿ ದಾಖಲಾಗಲಿದ್ದು ಹೊಸ ಭೂಮ್‌ ಬ್ಯಾರಿಯರ್‌ ನಿರ್ಮಿಸಲಾಗಿದೆ. ರಾತ್ರಿ ವೇಳೆ ಒಬ್ಬ ಪಿಎಸ್‌‍ಐ ನೇತೃತ್ವದಲ್ಲಿ ಇಬ್ಬರು ಪೊಲೀಸರು ಕಾವಲಿನಲ್ಲಿರುತ್ತಾರೆ ಎಂದು ವಿಕ್ರಂ ಅಮಟೆ ತಿಳಿಸಿದ್ದಾರೆ.

RELATED ARTICLES

Latest News