ಶ್ರೀನಗರ,ಆ.28- ಜಮು ಮತ್ತು ಕಾಶೀರದಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಕನಿಷ್ಟಪಕ್ಷ 41 ಮಂದಿ ಸಾವನ್ನಪ್ಪಿ, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಮತ್ತಷ್ಟು ಜನ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದೆ.
ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದ ಅರ್ಧಕುವರಿಯಲ್ಲಿರುವ ಇಂದಪ್ರಸ್ಥ ಭೋಜನಾಲಯದ ಬಳಿ ಭೂ ಕುಸಿತ ಉಂಟಾಗಿದ್ದರೆ, ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ನಾಲ್ವರು ಮೃತರಾಗಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ. ಕತ್ರಾದ ವೈಷ್ಣೋದೇವಿ ದೇವಾಲಯದ ಬಳಿ ಭಾರೀ
ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 41 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಅವರೆಲ್ಲರನ್ನೂ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೂರಾರು ಮನೆಗಳು, ಸೇತುವೆಗಳು, ನೀರಿನಲ್ಲಿ ಕೊಚ್ಚಿ ಹೋಗಿವೆ. ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿದ್ದು ನದಿಗಳಿಗೆ ನೀರು ಬಿಡಲಾಗಿದೆ. ನದಿಪಾತ್ರಗಳು ಮುಳುಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ.
ಪಂಜಾಬ್‌ನ ಪ್ರವಾಹ ಪೀಡಿತ ಗ್ರಾಮದಿಂದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ಸೇನಾ ಹೆಲಿಕಾಪ್ಟರ್‌ನಲ್ಲಿ ರಕ್ಷಣೆ ಮಾಡಲಾಗಿದೆ. ಸೇನಾ ಹೆಲಿಕಾಪ್ಟರ್ ತೆರಳುತ್ತಿದ್ದಂತೆ ಇತ್ತ ಯೋಧರು ಆಶ್ರಯ ಪಡೆದಿದ್ದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಕುಸಿದುಬಿದ್ದಿದೆ.
ಗುರುದಾಸ್‌ಪುರದ ಕರ್ತಾರಪುರ ಕಾರಿಡಾರ್ ಮುಳುಗಡೆಯಾಗಿದೆ. ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಿಯಾಸ್ ನದಿಯ ಪ್ರವಾಹದ ಆತಂಕ ತರಿಸಿದೆ. ಉತ್ತರಾಖಂಡ್‌ನಲ್ಲಿ ಜೀವಗಂಗೆ, ಯಮುನೆಯ ರುದ್ರತಾಂಡವ ಹೇಳತೀರದಾಗಿದೆ.
ಜಮು ಮತ್ತು ಕಾಶೀರದ ಸಿಎಂ ಒಮರ್ ಅಬ್ದುಲ್ಲಾ ಶ್ರೀನಗರದಿಂದ ಜಮುವಿಗೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.
ಮುಂದಿನ ಸೂಚನೆ ಬರುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯು ಎಕ್‌್ಸನಲ್ಲಿ ತಿಳಿಸಿದೆ. ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ಯಾತ್ರಿಕರು ತಮ ಯೋಜನೆಗಳನ್ನು ಮರುನಿಗದಿಪಡಿಸುವಂತೆ ಮಂಡಳಿಯು ಮನವಿ ಮಾಡಿಕೊಂಡಿದೆ.
ಭೂಕುಸಿತದ ಹಿನ್ನೆಲೆಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, +91 9906019460, +91 9906019446, +91 9103491554 ಸಂಪರ್ಕಿಸಲು ತಿಳಿಸಲಾಗಿದೆ. ಈತನಧ್ಯೆ, ಕಳೆದ ಎರಡು ದಿನಗಳಿಂದ ಜಮುಕಾಶೀರದಲ್ಲಿ ಮಳೆ ಮುಂದುವರೆದಿದ್ದು, ದೈನಂದಿನ ಜನಜೀವನ ಅಸ್ತವ್ಯಸ್ತಗೊಂಡಿದೆ, ಹೆದ್ದಾರಿ ಮುಚ್ಚುವಿಕೆ, ಶಾಲೆಗಳು ಬಂದ್ ಮತ್ತು ರೈಲು ಸೇವೆಗಳು ರದ್ದಾಗಿವೆ.
ಜಮುವಿನಲ್ಲಿ ಭಾರೀ ಮತ್ತು ನಿರಂತರ ಮಳೆಯಿಂದಾಗಿ ತಾವಿ ನದಿ ಉಕ್ಕಿ ಹರಿಯುತ್ತಿದ್ದು, ನಾಲ್ಕನೇ ತಾವಿ ಸೇತುವೆ ಬಳಿಯ ರಸ್ತೆ ಕೊಚ್ಚಿಹೋಗಿ, ಪ್ರದೇಶದಾದ್ಯಂತ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳು ಪ್ರವಾಹ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ನದಿಗಳು ಮತ್ತು ನಲ್ಲಾಗಳ ಬಳಿ ಹೋಗುವುದನ್ನು ತಪ್ಪಿಸಿ ಎಂದು ಜಮುವಿನ ಉಪಪೊಲೀಸ್ ಮಹಾನಿರ್ದೇಶಕ (ಡಿಐಜಿ) ಶಿವಕುಮಾರ್ ಶರ್ಮಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತವನ್ನು ಭೀಕರ ದುರಂತಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರೆಫ್) ತಂಡಗಳನ್ನು ಈಗಾಗಲೇ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಶಾ ಹೇಳಿದ್ದಾರೆ.