Friday, August 29, 2025
Homeರಾಜ್ಯಚಾಮುಂಡೇಶ್ವರಿ ದೇವಸ್ಥಾನ ಹಿಂದೂ ಧರ್ಮಕ್ಕೆ ಸೇರಿಲ್ಲವೆಂದಾದರೆ ಮುಜರಾಯಿ ಸುಪರ್ದಿಗೆ ಏಕೆ..?

ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ಧರ್ಮಕ್ಕೆ ಸೇರಿಲ್ಲವೆಂದಾದರೆ ಮುಜರಾಯಿ ಸುಪರ್ದಿಗೆ ಏಕೆ..?

If Chamundeshwari Temple is not part of Hinduism, why is it being handed over to Muzrai?

ಮೈಸೂರು,ಆ.28– ಬೂಕರ್‌ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಬಾನು ಮುಸ್ತಾಕ್‌ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿದ ಬಳಿಕ ಸಾಕಷ್ಟು ಚರ್ಚೆ, ವಾದ- ವಿವಾದಗಳು ಪ್ರಾರಂಭವಾಗಿದ್ದು, ಈ ಮಧ್ಯೆ ದಸರಾ ಕಾರ್ಯಕ್ರಮಗಳು ಧಾರ್ಮಿಕವಾ ಅಥವಾ ಸಾಂಸ್ಕೃತಿಕ, ಜಾತ್ಯಾತೀತ ಕಾರ್ಯಕ್ರಮಗಳಾ ಎಂಬ ಪ್ರಶ್ನೆಯೂ ಹುಟ್ಟುಕೊಂಡಿದೆ.

ಅಷ್ಟು ಮಾತ್ರವಲ್ಲದೆ, ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯವೂ ಈಗ ಚರ್ಚಾ ವಸ್ತು ಆಗಿದೆ. ಇಂತಹ ವೇಳೆ ರಾಜಮಾತೆ ಪ್ರಮೋದದೇವಿ ಒಡೆಯರ್‌ ಅವರು ಪತ್ರವೊಂದನ್ನು ಬಿಡುಗಡೆ ಮಾಡಿದ್ದಾರೆ.ಅವರು ಬರೆದ ಪತ್ರದ ಸಾರಾಂಶ :ಚಾಮುಂಡೇಶ್ವರಿ ದೇವಸ್ಥಾನ ಮತ್ತು ಈ ವರ್ಷದ ಸರ್ಕಾರದ ದಸರಾ ಆಚರಣೆಯ ಗೊಂದಲಕ್ಕೀಡಾದ ಸಂಗತಿ! ರಾಜ್ಯ ಸರ್ಕಾರವು ಈ ವರ್ಷ ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು, ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ ರಾಜಕೀಯವು ನಡೆಯುತ್ತಿರುವ ಸಂಗತಿ ತೀವ್ರ ಬೇಸರ ತಂದಿದೆ.

ಈ ವರ್ಷದ ನಾಡ ಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯ ಬಗ್ಗೆ ಭಿನ್ನಾಭಿಪ್ರಾಯಗಳಿಗೆ ಎಡೆಮಾಡಿದ್ದು ಇದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ಧರ್ಮಕ್ಕೆ ಸೇರಿಲ್ಲ ಎಂಬಂತಹ ಹೇಳಿಕೆಗಳು ಅನಗತ್ಯ.
ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ಪದ್ಧತಿಗನುಗುಣವಾಗಿ ಪೂಜೆ ಆಚರಣೆ ನಡೆದರೂ ಹಿಂದಿನಿಂದಲೂ ಅನ್ಯ ಧರ್ಮೀಯರಿಗೆ ದೇವಸ್ಥಾನದಲ್ಲಿ ಪ್ರವೇಶದ ಅವಕಾಶವಿತ್ತು ಮತ್ತು ಈಗಲೂ ಇದೆ.

ಅದು ಹಿಂದೂ ದೇವಸ್ಥಾನವಲ್ಲದಿದ್ದರೆ, ಅದನ್ನು ಎಂದಿಗೂ ಮುಜರಾಯಿ ಇಲಾಖೆಯ ಅಡಿಯಲ್ಲಿ ತರಲಾಗುತ್ತಿರಲಿಲ್ಲ.ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ ಪರಿಗಣಿತ ಅಭಿಪ್ರಾಯ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಪಂಗಡದ ಆಚರಣೆಗಳಿಗೆ ಅವಕಾಶವಿಲ್ಲವಾಗಿದ್ದು ಅಂತಹ ಉತ್ಸವವನ್ನು ನಡೆಸುವಲ್ಲಿ ಧಾರ್ಮಿಕ ಪಾವಿತ್ರ್ಯ, ಸಂಪ್ರದಾಯ ಅಥವಾ ಪರಂಪರೆಯನ್ನು ಪಡೆಯಲು ಸಾಧ್ಯವಿಲ್ಲ. ಈ ಕಾರಣದಿಂದ ಕರ್ನಾಟಕ ಸರ್ಕಾರ ಆಯೋಜಿಸುವ ಆಚರಣೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳೇ ಹೊರತು ಧಾರ್ಮಿಕ ಸಂಪ್ರದಾಯವಾಗಿಲ್ಲ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಶ್ವೀಯುಜ ಶರನ್ನವರಾತ್ರಿ ಸಮಯದಲ್ಲಿ ನಾವು ಖಾಸಗಿಯಾಗಿ ನವರಾತ್ರಿ ಸಂಬಂಧ ಧಾರ್ಮಿಕ ಆಚರಣೆಗಳನ್ನು ಹಳೆಯ ಪದ್ಧತಿಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ಅರಮನೆಯ ಒಳಾಂಗಣದಲ್ಲಿ ಮತ್ತು ಅರಮನೆಯ ಹೊರಾಂಗಣದಲ್ಲಿ ಶಾಸೋಕ್ತವಾಗಿ ಪಾಡ್ಯದಿಂದ ನವಮಿ ಪರ್ಯಂತ ಪೂಜೆನಡೆಸಿ ವಿಜಯದಶಮಿ ಆಚರಣೆಯೊಂದಿಗೆ ಪೂರ್ಣಗೊಳ್ಳುತ್ತದೆ. ಇದೇ ದಿನಗಳಲ್ಲಿ ಸರ್ಕಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಮುಂದೆ ಆಯೋಜಿಸಲಾಗಿರುವುದರಿಂದ, ನಮ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಸಮಯದ ಅತಿಕ್ರಮಣವನ್ನು ತಪ್ಪಿಸಲು, ಶ್ರೀ ಚಾಮುಂಡೇಶ್ವರಿಯ ಉದ್ಘಾಟನೆ ಮತ್ತು ಶ್ರೀ ಚಾಮುಂಡೇಶ್ವರಿಯ ಭವ್ಯ ಮೆರವಣಿಗೆಗೆ ಶುಭ ಮತ್ತು ಸೂಕ್ತ ಸಮಯವನ್ನು ನಿಗದಿಪಡಿಸಲಾಗುತ್ತದೆ.

ಈ ನಿಟ್ಟಿನಲ್ಲಿ ಗಣೇಶ ಚತುರ್ಥಿಯ ಆಚರಣೆ ಮತ್ತು ಅನುಗ್ರಹದಿಂದ ಎಲ್ಲಾ ಅಡೆತಡೆಗಳು, ತಪ್ಪು ಕಲ್ಪನೆಗಳು ಮತ್ತು ಸಂಘರ್ಷಗಳನ್ನು ನಿವಾರಣೆಯಾಗಿ, ಶೀಘ್ರದಲ್ಲೇ ಒಮತವನ್ನು ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

RELATED ARTICLES

Latest News