ಪ್ಯಾರಿಸ್,ಅ.30 ಇಲ್ಲಿ ನಡೆಯುತ್ತಿರುವ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ಗೆ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಈ ಬಾರಿ ಭಾರತಕ್ಕೆ ಪದಕ ಸಿಗುವುದು ಖಚಿತಪಟ್ಟಿದೆ.
ಕಳೆದ 2022 ರಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್‌ಗೆ ತಲುಪುವ ಮೂಲಕ ಕಂಚಿನ ಪದಕ ಗೆದ್ದಿದ್ದರು.ಇದೀಗ ಮತ್ತೊಮ್ಮೆ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಿರ್ಣಾಯಕ ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೂಲಕ ಕಂಚಿನ ಪದಕ ದೃಢಪಡಿಸಿಕೊಂಡಿರುವ ಈ ಜೋಡಿಯು ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್‌ಗೇರುವ ವಿಶ್ವಾಸದಲ್ಲಿದ್ದಾರೆ. ಪುರುಷರ ಡಬಲ್‌್ಸನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಮಲೇಷ್ಯಾದ ಜೋಡಿ ಆರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿದರು.
ಮೊದಲ ಸೆಟ್ ಅನ್ನು 21-12 ಅಂಕಗಳ ಅಂತರದಿಂದ ಗೆದ್ದ ಸಾತ್ವಿಕ್-ಚಿರಾಗ್, ದ್ವಿತೀಯ ಸೆಟ್‌ನಲ್ಲಿ 21-19 ಅಂತರದ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಪ್ಯಾರಿಸ್ ಒಲಿಂಪಿಕ್‌್ಸನ ಕ್ವಾರ್ಟರ್ ಫೈನಲ್‌ನಲ್ಲಿ ಆರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು.
ಇದಕ್ಕೂ ಮುನ್ನ 2023 ರಲ್ಲಿ ದುಬೈನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದರು. ಫೈನಲ್ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.
ಅಲ್ಲದೆ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಡಬಲ್‌್ಸ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಜೋಡಿ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ದೀಪ್ ಘೋಸ್ ಮತ್ತು ರಾಮನ್ ಘೋಸ್ ಜೋಡಿ 1971ರಲ್ಲಿ ನಡೆದ ಈ ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಆದರೆ 52 ವರ್ಷಗಳ ಏಷ್ಯಾದ ಅಂಗಳದಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಯಶಸ್ವಿಯಾಗಿದ್ದರು. ಇದೀಗ ವಿಶ್ವ ಬ್ಯಾಡ್ಮಿಂಟನ್‌ನಲ್ಲೂ ಹೊಸ ಅಧ್ಯಾಯ ಬರೆಯುವತ್ತ ಭಾರತದ ಜೋಡಿ ಮುಂದಾಗಿದೆ.
- ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ
- ರಾಜ್ಯದಲ್ಲಿ ಶೇ.99ರಷ್ಟು ಕೊಲೆ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ : ಪರಮೇಶ್ವರ್
- ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ 5 ಪಾಲಿಕೆಗಳಿಗೆ 10 ವಲಯ ಕಚೇರಿ
- ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಶೋಕ್ ವಾಗ್ದಾಳಿ
- ಗಣೇಶ ಮೂರ್ತಿ ಮೆರವಣಿಗೆ ವೇಳೆ ಪಟಾಕಿ ಸ್ಫೋಟ, ಬಾಲಕ ದುರ್ಮರಣ, ಹಲವರಿಗೆ ಗಾಯ