Homeರಾಜ್ಯನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ : KMF ಎಚ್ಚರಿಕೆ

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ : KMF ಎಚ್ಚರಿಕೆ

Strict action against those spreading false information about Nandini products

ಬೆಂಗಳೂರು,ಫೆ.17- ನಂದಿನಿ ಬ್ರ್ಯಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನುಕ್ರಮ ಜರುಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್‌) ಎಚ್ಚರಿಕೆ ನೀಡಿದೆ.

ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗು ತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಿರುವುದು ನಮ ಗಮನಕ್ಕೆ ಬಂದಿದೆ ಎಂದು ಮಂಡಳಿ ಹೇಳಿದೆ.

ಕೆ.ಎಂ.ಎಫ್‌ ಕಾನೂನುಬದ್ದ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (ಎಫ್‌ಎಸ್‌‍ ಎಎಐ) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲ ಎಂದು ಕರ್ನಾಟಕ ಹಾಲು ಮಹಾಮಂಡಳಿಯು ಗ್ರಾಹಕರಿಕೆ ಭರವಸೆ ನೀಡಿದೆ.

ಕರ್ನಾಟಕ ಹಾಲು ಮಹಾಮಂಡಳಿಯು ಆಧಾರರಹಿತ, ತಪ್ಪು ದಾರಿಗೆಳೆಯುವ ಮತ್ತು ಬ್ರ್ಯಾಂಡ್‌ನ ಮಾನಹಾನಿಕರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಇಂತಹ ದುರುದ್ದೇಶಪೂರಿತ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಕೆಎಂಎಫ್‌ ಎಚ್ಚರಿಸಿದೆ.

RELATED ARTICLES

Latest News