ನವದೆಹಲಿ, ಸೆ.1: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಬಳಕೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ಂದಿನಿಒಂದಲೆ ಇದು ಜಾರಿಯಾಗಿದ್ದು,ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ.
ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಜಾಗತಿಕ ಇಂಧನ ದರ ಲೆಕ್ಕಾಚಾರ ಮಾಡಿ ನಿಯಮಿತ ಮಾಸಿಕ ಪರಿಷ್ಕರಣೆಗಳ ಭಾಗವಾಗಿ ಈ ದರ ಇಳಿಕೆ ಕಡಿತ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನ ಬೆಂಗಳೂರಿನಲ್ಲೂ 51.50 ರೂ. ಇಳಿಕೆಯೊಂದಿಗೆ ಪ್ರತಿ ಸಿಲೆಂಡರ್ ಬಲೆ 1,653 ರೂ ಇಳಿದಿದೆ ಇದರಿಂದ ನಗರ ಕೇಂದ್ರಗಳಲ್ಲಿ ಕಾರ್ಯಾಚರಣೆಯ ವೆಚ್ಚವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ. ನ್ನು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ.ಸಿಗುತ್ತಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-09-2025)
- ಸಾಹಸಸಿಂಹ ಡಾ.ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಸಾಧ್ಯತೆ..?
- ಬೆಂಗಳೂರಲ್ಲಿ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತ ಮತ್ತು ರೋಡ್ ರೇಜ್ ಪ್ರಕರಣಗಳಲ್ಲಿ ನಾಲ್ವರ ಸಾವು
- ನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಸೌಜನ್ಯ ಕೇಸ್ : ಕ್ಲೀನ್ಚಿಟ್ ಪಡೆದಿದ್ದ ಆರೋಪಿಗಳನ್ನು ಪುನಃ ತನಿಖೆಗೆ ಒಳಪಡಿಸಿದ ಎಸ್ಐಟಿ