ಮೈಸೂರು,ಸೆ.1– ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದು ನೈಮಿಷಂ ಕ್ಯಾಂಪಸ್‌ನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವದಲ್ಲಿ ಭಾಗವಹಿಸಿ ರಾತ್ರಿ 8 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ನಾಳೆ ಬೆಳಗ್ಗೆ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಕುಟುಂಬದವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸಿ ದೆಹಲಿಗೆ ತೆರಳಲಿದ್ದಾರೆ.ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನದವರೆಗೂ ಅರಮನೆ ಹಾಗೂ ರಾತ್ರಿವರೆಗೂ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಟ್ಕರ್, ಡಿಸಿಪಿಗಳಾದ ಬಿಂದುಮಣಿ, ಸುಂದರ್‌ರಾಜ್ ಹಾಗೂ ಸಿಬ್ಬಂದಿಗಳು, ರಾಷ್ಟ್ರಪತಿಗಳು ಭೇಟಿ ನೀಡುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ರಾಡಿಸನ್ ಬ್ಲೂ ಹೋಟೆಲ್, ಮೈಸೂರು ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಭದ್ರತೆಯನ್ನು ಪರಿಶೀಲಿಸಿದರು.
- ಧರ್ಮಸ್ಥಳ ಪ್ರಕರಣ NIAಗೆ ವಹಿಸಿ: ಸಂತರಿಂದ ಅಮಿತ್ಶಾಗೆ ಮನವಿ
- ಜಾಗತಿಕ ಮಾದರಿಯ ಏಕರೂಪ ಜಿಎಸ್ಟಿಗೆ ಗೃಹ ಸಚಿವ ಪರಮೇಶ್ವರ್ ಆಗ್ರಹ
- ಮಾವೋವಾದಿಗಳ ಗುಂಡೇಟಿಗೆ ಇಬ್ಬರು ಯೋಧರು ಬಲಿ
- ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ
- ಕ್ರಿಕೆಟಿಗ ಶಿಖರ್ ಧವನ್ಗೆ ಇಡಿ ಸಮನ್ಸ್