ಶೃಂಗೇರಿ,ಸೆ.5-ನಡು ರಸ್ತೆಯಲ್ಲಿ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕು ಇರಿದಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್‌ನಲ್ಲಿ ನಡೆದಿದೆ.ಪಟ್ಟಣದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ.
ಕೊಪ್ಪ ತಾಲೂಕಿನ ಗುಡ್ಡೆ ತೋಟದ ಗ್ರಾಮದ ಯುವಕ ಹಾಗು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ. ಕಳಸ ಪಟ್ಟಣದ ಮಹಾವೀರ ವೃತ್ತದ ಬಳಿ ನಡುರಸ್ತೆಯಲೇ ಇಬ್ಬರಿಗೂ ಜಗಳವಾಗಿದೆ ಇದು ವಿಕೋಪಕ್ಕೆ ತಿರುಗಿ ಕಲ್ಲಿನಿಂದ ಹೊಡದು ಚಾಕುವಿನಿಂದ ಇರಿದಿದ್ದಾನೆ .
ಹಲ್ಲೆಯಿಂದ ಯುವತಿ ಕುಸಿದು ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ ಸ್ಥಳೀಯರು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.ಕಳಸ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಯುವಕ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.