ನವದೆಹಲಿ,ಸೆ.6– ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲಿಕ್ ಪಾನೀಯಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು. ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಸಾಧ್ಯತೆಯ ಕುರಿತು ಕೇಳಿದಾಗ ತಕ್ಷಣ ಇದು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.
2017ರ ಜುಲೈನಲ್ಲಿ ಜಿಎಸ್‌ಟಿ ಜಾರಿಗೆ ಬಂದಾಗ, ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಕೆಲವು ಉತ್ಪನ್ನಗಳನ್ನು ಇದರ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು. ಈ ಉತ್ಪನ್ನಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಬಕಾರಿ ಸುಂಕ (ಎಕ್ಸೈಸ್ ಡ್ಯೂಟಿ) ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮೂಲಕ ಗಣನೀಯ ಆದಾಯವನ್ನು ತಂದುಕೊಡುವ ಕಾರಣ, ಇವುಗಳನ್ನು ಜಿಎಸ್‌ಟಿಯಿಂದ ಹೊರಗಿಡಲು ನಿರ್ಧರಿಸಲಾಗಿತ್ತು.
ಒಂದು ವೇಳೆ ಇವುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿದರೆ, ರಾಜ್ಯ ಸರ್ಕಾರಗಳಿಗೆ ತಮ ಆರ್ಥಿಕ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಈ ಕಾರಣದಿಂದಾಗಿ, ಇಂಧನ ಮತ್ತು ಆಲ್ಕೊಹಾಲ್‌ನ ಮೇಲಿನ ತೆರಿಗೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ವಿಧಿಸುತ್ತಿವೆ, ಇದರಿಂದಾಗಿ ಗ್ರಾಹಕರಿಗೆ ಈ ಉತ್ಪನ್ನಗಳ ಬೆಲೆ ಹೆಚ್ಚಾಗಿರುತ್ತದೆ.
ದೈನಂದಿನ ಬಳಕೆಯ ವಸ್ತುಗಳಾದ ಶಾಂಪೂ, ಕೂದಲ ಎಣ್ಣೆ, ಆಟೋಮೊಬೈಲ್‌ಗಳು ಮತ್ತು ಟಿವಿಗಳಿಗೆ ಜಿಎಸ್‌ಟಿ ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಯಿತು. ಇದರ ಜೊತೆಗೆ, ಜಿಎಸ್‌ಟಿ ರಚನೆಯನ್ನು ಸರಳೀಕರಿಸಲು ಕೇವಲ ಮೂರು ತೆರಿಗೆ ದರಗಳನ್ನು ಶೇ.5, ಶೇ.18 ಮತ್ತು ಶೇ.40 ರಷ್ಟು ಜಾರಿಗೆ ತರಲಾಯಿತು. ಈ ನಿರ್ಧಾರವು ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸುವ ಗುರಿಯನ್ನು ಹೊಂದಿದೆ.
ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದರಿಂದ ರಾಜ್ಯ ಸರ್ಕಾರಗಳಿಗೆ ಆದಾಯದ ಮೇಲೆ ಗಂಭೀರ ಪರಿಣಾಮ ಬೀರಬಹುದಾದ ಕಾರಣ, ಸದ್ಯಕ್ಕೆ ಈ ಉತ್ಪನ್ನಗಳನ್ನು ಜಿಎಸ್‌ಟಿಯಿಂದ ಹೊರಗಿಡುವ ನಿರ್ಧಾರವನ್ನು ಮುಂದುವರೆಸಲಾಗುವುದು ಎಂದು ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಆದರೆ, ಭವಿಷ್ಯದಲ್ಲಿ ಈ ವಿಷಯದ ಮೇಲೆ ಚರ್ಚೆ ನಡೆಯುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿಲ್ಲ.
56 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಶೇ.5 ಮತ್ತು ಶೇ.18 ರ ಎರಡು ತೆರಿಗೆ ಸ್ಲ್ಯಾಬ್‌ಗಳನ್ನು ಅನುಮೋದಿಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಹಣಕಾಸು ಸಚಿವರು, ಆರೋಗ್ಯ ವಿಮೆ, ದಿನಬಳಕೆ ವಸ್ತುಗಳು, ಕೃಷಿ ಸಂಬಂಧಿತ ಸಾಧನಗಳು, ಶಿಕ್ಷಣ ಹೀಗೆ ಅನೇಕ ಸರಕುಗಳಲ್ಲಿ ಟ್ಯಾಕ್‌್ಸ ದರವನ್ನು ಇಳಿಸಲಾಗಿದೆ ಎಂದು ಹೇಳಿದ್ದಾರೆ.