ಚಿಕ್ಕಬಳ್ಳಾಪುರ, ಸೆ 9– ಪ್ರೀಯಸಿ ಮೊಬೈಲ್ ನಂಬರ್‌ನ್ನು ಬ್ಲಾಕ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಪೆರೆಸಂದ್ರ ಕ್ರಾಸ್‌ನ ಶಾಂತ ಗ್ರೂ್ ಆಪ್ ಇನ್ಟಿಟೂಷನ್ ನ ಹಾಸ್ಟೆಲ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ವಯನಾಡು ಮೂಲದ ಮೊಹಮದ್ ಶಬ್ಬೀರ್ (26) ಎಂದು ಗುರುತಿಸಲಾಗಿದೆ.
ಅಲೈಡ್ ಸ್ಸೃ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ಮೊಹಮದ್ ಶಬ್ಬೀರ್ ತನ್ನ ಹಾಸ್ಟೆಲ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ರೂಮಿನ ಕಿಟಕಿಗೆ ಪಂಚೆಯನ್ನು ಕಟ್ಟಿ, ಅದರಿಂದ ಕತ್ತು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.
ಸುದ್ದಿ ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೇರೇಸಂದ್ರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದಾಗ, ಶಬ್ಬೀರ್‌ನ ಕೋಣೆಯಲ್ಲಿ ಒಂದು ಡೆತ್‌ನೋಟ್ ಲಭ್ಯವಾಗಿದೆ. ಪೊಲೀಸರು ಈ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.
ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೆತಿಸುತ್ತಿದ್ದ. ಆದರೆ ಆ ಹುಡುಗಿ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ಬ್ಲಾಕ್ ಮಾಡಿ ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದ ಶಬ್ಬೀರ್ ಆತಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಪೇರೇಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.