Saturday, April 18, 2026
Homeರಾಜಕೀಯನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ : ಆರ್‌.ಅಶೋಕ್‌

ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ : ಆರ್‌.ಅಶೋಕ್‌

Kannadigas will not be safe until the Congress government is removed: R. Ashok

ಬೆಂಗಳೂರು,ಫೆ.18- ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕನ್ನಡಿಗರಿಗೂ ನೆಮ್ಮದಿ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಮ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್‌‍ ಮಾಡಿರುವ ಅವರು, ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತವಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಶಾಸಕರ ಮೇಲೆ ಹಿಡಿತವಿಲ್ಲ. ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಮತ್ತೊಂದು ಪೋಸ್ಟ್‌‍ ನಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೇ, 880 ಕೋಟಿ ರೂ. ಮೌಲ್ಯದ 890 ವಿವಿಧ ಔಷಧಗಳನ್ನು ಖರೀದಿಸುವಂತೆ ಆರ್ಥಿಕ ಇಲಾಖೆ ಅನುಮೋದನೆ ಕೊಟ್ಟು 7 ತಿಂಗಳು ಕಳೆದರೂ ಇನ್ನೂ ಏಕೆ ಖರೀದಿ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ ಕೈಯಲ್ಲಿ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಬಡವರ ಜೀವದ ಜೊತೆ ಯಾಕೆ ಚೆಲ್ಲಾಟ ಆಡುತ್ತೀರಿ? ಸಿಎಂ ಸಿದ್ದರಾಮಯ್ಯ ನವರೇ, ನಿಮ ಕಾಂಗ್ರೆಸ್‌‍ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಆರೋಗ್ಯ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

RELATED ARTICLES

Latest News