Monday, May 19, 2025
Homeರಾಜ್ಯಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ

ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ

ಬೆಂಗಳೂರು,ನ.24-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ NRI ವೈದ್ಯ

ಭ್ರಷ್ಟ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.

RELATED ARTICLES

Latest News