ಬೆಂಗಳೂರು,ಸೆ.12– ಬುರುಡೆ ಪ್ರಕರಣದಲ್ಲಿ ಇಂದು ಮತ್ತೆ ಮೂವರು ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ಯೂಟ್ಯೂಬರ್ ಪ್ರದೀಪ್‌ಗೆ ಸೂಚಿಸಲಾಗಿತ್ತು.
ಹಾಗಾಗಿ ಇಂದು ಈ ಮೂವರು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ.ಬುರುಡೆ ಪ್ರಕರಣದ ದೂರುದಾರ ಚಿನ್ನಯ್ಯ ಬಂಧನವಾಗುತ್ತಿದ್ದಂತೆ ಆತ ವಿಚಾರಣೆ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಈ ಮೂವರನ್ನು ಈಗಾಗಲೇ ಎರಡು-ಮೂರು ಬಾರಿ ವಿಚಾರಣೆಗೆ ಒಳಪಡಿಸಿ ಎಸ್‌ಐಟಿ ಅಧಿಕಾರಿಗಳು ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದ್ದಾರೆ. ಇಂದು ಮತ್ತೆ ಅಧಿಕಾರಿಗಳು ಈ ಮೂವರನ್ನು ವಿಚಾರಣೆಗೆ ಒಳಪಡಿಸಿ ತನಿಖೆಯ ಭಾಗವಾಗಿ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.