ಹೊಸಕೋಟೆ,ಸೆ.14- ಸಾಲಬಾಧೆ ತಾಳಲಾರದೆ ಆತಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.
ಪತಿ ಶಿವು (32), ಚಂದ್ರಕಲಾ (11), ಉದಯ ಸೂರ್ಯ (7) ಮೃತಪಟ್ಟ ದುರ್ದೈವಿಗಳು.
ಕೆಲವು ವರ್ಷಗಳ ಹಿಂದೆ ಶಿವು ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಈ ಕುಟುಂಬ ಸಾಲ ಮಾಡಿಕೊಂಡಿತ್ತು. ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ನಾವು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂದು ಮಕ್ಕಳನ್ನು ಸಾಯಿಸುವ ನಿರ್ಧಾರ ಮಾಡಿದ್ದಾರೆ.
ಕಳೆದ ರಾತ್ರಿ ದಂಪತಿ ಇಬ್ಬರು ಮಕ್ಕಳ ಕುತ್ತಿಗೆಗೆ ವೇಲ್‌ನಿಂದ ಬಿಗಿದು ನಂತರ ಬಕೆಟ್‌ನಲ್ಲಿ ತಲೆ ಮುಳುಗಿಸಿ ಕೊಲೆ ಮಾಡಿ, ಪತಿ ಶಿವು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.
ತದನಂತರ ಪತ್ನಿಯೂ ಕೂಡ ವೇಲ್‌ನಿಂದ ನೇಣು ಬಿಗಿದುಕೊಂಡಿದ್ದಾಳೆ. ಆದರೆ ವೇಲ್ ತುಂಡಾಗಿ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಮಂಜುಳಾಗೆ ಹೊಸಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.