ದುಬೈ,ಸೆ.16- ಏಷ್ಯಾ ಕಪ್‌ನ ಉಳಿದ ಪಂದ್ಯಗಳಿಂದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕಬೇಕೆಂಬ ಪಾಕಿಸ್ತಾನದ ಬೇಡಿಕೆಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ.
ಭಾರತ-ಪಾಕಿಸ್ತಾನ ನಡುವೆ ನಡೆದ ಪಂದ್ಯದ ನಂತರ ಔಪಚಾರಿಕವಾಗಿ ಭಾರತೀಯ ಆಟಗಾರರು ಹಸ್ತಲಾಘವ ಮಾಡದಿರುವುದಕ್ಕೆ ಭಾರೀ ವಿವಾದ ಉಂಟಾಗಿತ್ತು. ಹೀಗಾಗಿ ಪಂದ್ಯದ ರೆಫ್ರರಿಯನ್ನು ತೆಗೆದು ಹಾಕಬೇಕೆಂದು ಪಾಕ್ ಐಸಿಸಿಗೆ ದೂರು ನೀಡಿತ್ತು. ಆದರೆ ಈ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ವಿರುದ್ಧ ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರು ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರನ್ನು ಏಷ್ಯಾ ಕಪ್‌ನಿಂದ ತಕ್ಷಣ ತೆಗೆದುಹಾಕಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಒತ್ತಾಯಿಸಿತ್ತು.ಪಂದ್ಯದ ಕೊನೆಯಲ್ಲಿ ಪೈಕ್ರಾಫ್ಟ್ ಅಂಪೈರ್ ಆಗಿ ಕಾರ್ಯನಿರ್ವಹಿಸಿದರು. ಆದರೆ, ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರು ಎದುರಾಳಿ ತಂಡದ ಆಟಗಾರರೊಂದಿಗೆ ಕೈಕುಲುಕಲಿಲ್ಲ ಎಂದು ಪಿಸಿಬಿ ಪೈಕ್ರಾಫ್‌್ಟ ವಿರುದ್ಧ ಐಸಿಸಿಗೆ ಔಪಚಾರಿಕ ದೂರು ದಾಖಲಿಸಿತ್ತು.
ಐಸಿಸಿ ನೀತಿ ಸಂಹಿತೆ ಮತ್ತು ಕ್ರಿಕೆಟ್ ಸ್ಫೂರ್ತಿಗೆ ಸಂಬಂಧಿಸಿದ ಎಂಸಿಸಿ ಕಾನೂನುಗಳನ್ನು ಮ್ಯಾಚ್ ರೆಫರಿ ಉಲ್ಲಂಘಿಸಿದ್ದಾರೆ. ಏಷ್ಯಾ ಕಪ್‌ನಿಂದ ಮ್ಯಾಚ್ ರೆಫರಿಯನ್ನು ತಕ್ಷಣವೇ ತೆಗೆದುಹಾಕಬೇಕೆಂದು ಪಿಸಿಬಿ ಒತ್ತಾಯಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ X ನಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಈ ಹಿಂದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಜೊತೆ ಈ ವಿಷಯವನ್ನು ಪ್ರಸ್ತಾಪಿಸಿ, ಭಾರತೀಯ ಆಟಗಾರರ ನಡವಳಿಕೆಯನ್ನು ಕ್ರೀಡಾಯೋಗ್ಯವಲ್ಲ ಎಂದು ಕರೆದಿತ್ತು. ಭಾರತೀಯ ಆಟಗಾರರು ಕೈಕುಲುಕದಿರುವ ವರ್ತನೆಯ ವಿರುದ್ಧ ತಂಡದ ವ್ಯವಸ್ಥಾಪಕ ನವೀದ್ ಚೀಮಾ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಇದನ್ನು ಕ್ರೀಡಾಯೋಗ್ಯವಲ್ಲದ ಮತ್ತು ಆಟದ ವಿರುದ್ಧವೆಂದು ಪರಿಗಣಿಸಲಾಗಿದೆ. ಪ್ರತಿಭಟನೆಯಾಗಿ ನಾವು ನಮ ತಂಡದ ನಾಯಕನನ್ನು ಪಂದ್ಯದ ನಂತರದ ಸಮಾರಂಭಕ್ಕೆ ಕಳುಹಿಸಲಿಲ್ಲೞ ಎಂದು ಪಿಸಿಬಿ ಈ ಹಿಂದೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ಜಮು ಮತ್ತು ಕಾಶೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಮೇ ತಿಂಗಳಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಐತಿಹಾಸಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ಮುಖಾಮುಖಿಯಾಗಿವೆ.