ನವದೆಹಲಿ,ಸೆ.17- 75ನೇ ವಸಂತಕ್ಕೆ ಕಾಲಿಟ್ಟ ಭಾರತದ ಪ್ರಧಾನಿ ನರೇಂದ್ರಮೋದಿ ಅವರಿಗೆ ವಿಶ್ವದ ನಾಯಕರು ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಸುಭಾಷಯಗಳನ್ನು ಕೋರಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಅನೇಕ ಗಣ್ಯರು ಮೋದಿಗೆ ಶುಭಾಷಯಗಳನ್ನು ಕೋರಿ ಹಾರೈಸಿದ್ದಾರೆ.
ಇಂದು ಜಾಗತಿಕ ಸಮುದಾಯವು ನಿಮ ಮಾರ್ಗದರ್ಶನದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸುತ್ತಿದೆ. ನಿಮ ಅಸಾಧಾರಣ ನಾಯಕತ್ವದ ಮೂಲಕ ಕಠಿಣ ಪರಿಶ್ರಮದ ಪರಾಕಾಷ್ಟೆಯನ್ನು ನಿರೂಪಿಸುವ ನೀವು ದೇಶದಲ್ಲಿ ಉತ್ತಮ ಗುರಿಗಳನ್ನು ಸಾಧಿಸುವ ಸಂಸ್ಕೃತಿ ಹುಟ್ಟು ಹಾಕಿದ್ದೀರಿ.
ನೀವು ಹೆಚ್ಚು ಆರೋಗ್ಯವಾಗಿರಬೇಕೆಂದು ಮತ್ತು ಸಂತೋಷವಾಗಿರಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶವನ್ನ ಇನ್ನಷ್ಟು ಎತ್ತರಕ್ಕೆ ಕೊಂಡಿಯ್ಯಿರಿ ಎಂದು ಮುರ್ಮು ಅವರು ಎಕ್‌್ಸನಲ್ಲಿ ಮೋದಿಗೆ ಶುಭ ಕೋರಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ನಿಮ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ವೇದಿಕೆಯಲ್ಲಿ ಛಾಪು ಮೂಡಿಸುತ್ತಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರದ ಗುರಿಯತ್ತ ಚಿರವಾಗಿ ಚಲಿಸುತ್ತಿದೆ. ದೇವರು ನಿಮಗೆ ಇನ್ನಷ್ಟು ದೇಶ ಸೇವೆಯನ್ನು ಮಾಡಲು ಆರೋಗ್ಯ ನೀಡಲಿ ಎಂದು ಹಾರೈಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೋದಿಯವರಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು, ನಿಮ ನಾಯಕತ್ವದಲ್ಲಿ ಅಸಾಧಾರಣವಾಗಿ ದೇಶ ಮುನ್ನುಗುತ್ತಿದೆ. ಭಾರತ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ. ನಿಮ ಸೇವೆ ಇದೇ ರೀತಿ ಮುಂದುವರೆಯಲಿ ಎಂದಿದ್ದಾರೆ.
ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡ, ರಾಜನಾಥ್ ಸಿಂಗ್, ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ನಿರ್ಮಲ ಸೀತಾರಾಮನ್, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವೀಸ್, ಹಿಮಂತ್ ಬಿಸ್ವಾಸ್, ರೇಖಾ ಗುಪ್ತ, ರೇವಂತ್ ರೆಡ್ಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪ್ರಧಾನಿಗೆ ಹುಟ್ಟುಹಬ್ಬದ ಶುಭ ಹಾರೈಸಿದ್ದಾರೆ.