Friday, November 22, 2024
Homeರಾಜ್ಯಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್‌ವೈ ಗರಂ

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್‌ವೈ ಗರಂ

ಬೆಂಗಳೂರು,ನ.25- ಜಾರಿ ನಿರ್ದೇಶನಾಲಯ(ಇಡಿ)ವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿರ್ಧಾರವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.

ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾ ಈ ಕ್ರಮವನ್ನು ತೆಗೆದುಕೊಂಡಿತ್ತೆಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು.ಇದರಲ್ಲಿ ನಿಯಮಗಳ ಉಲ್ಲಂಘನೆಯಾಗಿರುವುದು ಎಲ್ಲಿಂದ ಎಂದು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಈಗ ತಿರುಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ದೀರ್ಘ ಕಾಲದ ಗೆಳತಿಯ ವರಿಸಿದ ನವದೀಪ್ ಶೈನಿ

ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿದ್ದೇನೋ ಅದಕ್ಕೆ ಬದ್ದನಾಗುತ್ತೇನೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಇಂದು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

ಮನೆಗೆ ಹೋಗುವವರು ಯಾರು?:
ನಮ್ಮ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರುವುದು ಬೇಡ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೂ ಯಡಿಯೂರಪ್ಪ ತಿರುಗೇಟು ಕೊಟ್ಟರು. ಅವರ ಮನೆಗೆ ಹೋಗುತ್ತೇನೆ ಎಂದವರು ಯಾರು ಎಂದು ಬಿಎಸ್‍ವೈ ಪ್ರಶ್ನೆ ಮಾಡಿದರು.

ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ನಾನು ದೂರವಾಣಿಯಲ್ಲಿ ಸಂಪರ್ಕಿಸುವ ಪ್ರಯತ್ನ ಮಾಡಿದೆ. ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮುಂದಿನ ದಿನಗಳಲ್ಲಿ ಅವರ ಜೊತೆ ಮಾತನಾಡುತ್ತೇನೆಎಂದು ಹೇಳಿದರು.
ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜೊತೆ ಸೋಮಣ್ಣ ಮಾತನಾಡಿರುವುದನ್ನು ಗಮನಿಸಿದ್ದೇನೆ. ಫೋನ್ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಬರುವ ದಿನಗಳಲ್ಲಿ ಎಲ್ಲವೂ ಇತ್ಯರ್ಥವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲಾಗುವುದು. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅವರಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಬಿಜೆಪಿ ಬಿಟ್ಟು ಹೋಗುವ ಚಿಂತನೆಯಲ್ಲಿ ಅವರಿಲ್ಲ ಎಂದು ಯಡಿಯೂರಪ್ಪ ಹೇಳಿದರು.

RELATED ARTICLES

Latest News