Thursday, September 18, 2025
Homeರಾಷ್ಟ್ರೀಯ | Nationalಪಾಕ್-ಸೌದಿ ಅರೇಬಿಯಾ ರಕ್ಷಣಾ ಒಪ್ಪಂದದ ಕುರಿತು ಭಾರತ ಅಲರ್ಟ್

ಪಾಕ್-ಸೌದಿ ಅರೇಬಿಯಾ ರಕ್ಷಣಾ ಒಪ್ಪಂದದ ಕುರಿತು ಭಾರತ ಅಲರ್ಟ್

Pakistan-Saudi Arabia defence deal: India weighs implications, issues first reaction

ನವದೆಹಲಿ, ಸೆ.18- ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ರಕ್ಷಣಾ ಒಪ್ಪಂದಕ್ಕೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಭಾರತ ತನ್ನ ರಾಷ್ಟ್ರೀಯ ಭದ್ರತೆ, ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಗೆ ಎದುರಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡುವುದಾಗಿ ಹೇಳಿದೆ. ಒಪ್ಪಂದವು ಎರಡೂ ದೇಶಗಳಲ್ಲಿ ಯಾವುದಾದರೂ ಒಂದು ದೇಶಗಳ ವಿರುದ್ಧದ ಯಾವುದೇ ಆಕ್ರಮಣವನ್ನು ಎರಡೂ ದೇಶಗಳ ವಿರುದ್ಧದ ಆಕ್ರಮಣವೆಂದು ಪರಿಗಣಿಸಲಾಗುತ್ತದೆ ಎಂದು ಪಾಕಿಸ್ತಾನ-ಸೌದಿ ಅರೇಬಿಯಾ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌‍, ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಬದ್ಧವಾಗಿದೆ ಎಂದು ಹೇಳಿದರು.

ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸೌದಿ ಅರೇಬಿಯಾದ ಕ್ರೌನ್‌ ಪ್ರಿನ್ಸ್ ಮೊಹಮದ್‌ ಬಿನ್‌ ಸಲಾನ್‌ ಅಬ್ದುಲಜೀಜ್‌ ಅಲ್‌ ಸೌದ್‌ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಸಹಿ ಹಾಕಿದರು.

ಸೌದಿ ಅರೇಬಿಯಾ ಮತ್ತು ಪಾಕಿಸ್ತಾನದ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು ನಾವು ನೋಡಿದ್ದೇವೆ ಎಂದು ಜೈಸ್ವಾಲ್‌ ಹೇಳಿದರು. ಎರಡೂ ದೇಶಗಳ ನಡುವಿನ ದೀರ್ಘಕಾಲದ ಒಪ್ಪಂದವನ್ನು ಔಪಚಾರಿಕಗೊಳಿಸುವ ಈ ಬೆಳವಣಿಗೆಯು ಪರಿಗಣನೆಯಲ್ಲಿದೆ ಎಂದು ಸರ್ಕಾರಕ್ಕೆ ತಿಳಿದಿತ್ತು ಎಂದು ಅವರು ಹೇಳಿದರು.

ನಮ ರಾಷ್ಟ್ರೀಯ ಭದ್ರತೆಗೆ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಗೆ ಈ ಬೆಳವಣಿಗೆಯ ಪರಿಣಾಮಗಳನ್ನು ಭಾರತ ಅಧ್ಯಯನ ಮಾಡುತ್ತದೆ ಎಂದು ಜೈಸ್ವಾಲ್‌ ಹೇಳಿದರು. ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

RELATED ARTICLES

Latest News