Saturday, September 20, 2025
Homeರಾಜ್ಯಜಿಎಸ್‌ಟಿ ಸುಧಾರಣೆ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ದರ ಇಳಿಕೆ : ಇಲ್ಲಿದೆ ಪರಿಷ್ಕೃತ ದರಗಳ ಪಟ್ಟಿ

ಜಿಎಸ್‌ಟಿ ಸುಧಾರಣೆ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ದರ ಇಳಿಕೆ : ಇಲ್ಲಿದೆ ಪರಿಷ್ಕೃತ ದರಗಳ ಪಟ್ಟಿ

Nandini products prices reduced in the wake of GST reforms

ಬೆಂಗಳೂರು, ಸೆ.20– ಕೇಂದ್ರ ಸರ್ಕಾರವು ಸಾರ್ವಜನಿಕರ ದೈನಂದಿನ ಬಳಕೆಯ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಇಳಿಕೆ ಮಾಡಿದ್ದು ಸೆ.22 ರಿಂದ ಕಡ್ಡಾಯವಾಗಿ ಎಲ್ಲಾ ಆಹಾರ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳು ಜಾರಿಗೊಳಿಸುವಂತೆ ತಿಳಿಸಲಾಗಿದೆ. ಅದರಂತೆ ಕೆಎಂಎಫ್ ಸಂಸ್ಥೆಯ ನಂದಿನಿ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಲಾಗಿದೆ.

*ನಂದಿನಿ ತುಪ್ಪ, ಬೆಣ್ಣೆ, ಚೀಸ್, ಕುರುಕು ತಿಂಡಿಗಳ ಮೇಲಿನ ಜಿಎಸ್‌ಟಿ ಶೇ.12 ರಿಂದ 5ಕ್ಕೆ ಇಳಿಸಲಾಗಿದೆ.
*ನಂದಿನಿ ಕುಕೀಸ್, ಚಾಕೋಲೇಟ್ಸ್, ಐಸ್‌ಕ್ರೀಂ, ಇನ್ಸ್‌ಟೆಂಟ್ ಮಿಕ್ಸ್ ಮತ್ತು ಪ್ಯಾಕ್ಟ್ ನೀರಿನ ಮೇಲಿನ ಜಿಎಸ್‌ಟಿ ಶೇ.18 ರಿಂದ 5ಕ್ಕೆ,
*ನಂದಿನಿ ಪನೀರ್ ಮತ್ತು ಯುಹೆಚ್ ಟಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಶೇ.5 ರಿಂದ 0, ರಂತೆ ಇಳಿಕೆ ಮಾಡಲಾಗಿದೆ.
ಪರಿಷ್ಕೃತ ದರಗಳು ಸೆ.22 ರಿಂದ ಅನ್ವಯವಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಶಿವಸ್ವಾಮಿ ಅವರು ತಿಳಿಸಿದ್ದಾರೆ.

ಪರಿಷ್ಕೃತ ದರಗಳು ಇಂತಿವೆ :

RELATED ARTICLES

Latest News