ಕೊಂಡಗಾಂವ್, ಸೆ.21-ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರಿಗಾಗಿ ನಿರ್ಮಿಸಲಾಗಿದ್ದ ಟೆಂಟ್ ಭಾರಿ ಗಾಳಿಯಿಂದ ಹೈಟೆನ್ನನ್ ವಿದ್ಯುತ್ ತಂತಿಗೆ ತಗುಲಿ ಮೂವರು ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ನಡೆದಿದೆ.
ಬಡೇರಾಜ್‌ಪುರ ಅಭಿವೃದ್ಧಿ ಬ್ಲಾಕ್‌ನ ರಾವಸ್ವಾಹಿ ಗ್ರಾಮದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಸತೀಶ್ ನೇತಮ್, ಶ್ಯಾಮ್‌ಲಾಲ್ ನೇತಮ್ ಮತ್ತು ಸುನಿಲ್ ಶೋರಿ ಎಂದು ಗುರುತಿಸಲಾಗಿದೆ.
ಹಠಾತ್ ಬಿರುಗಾಳಿ ಬೀಸಿದ ಪರಿಣಾಮ ಜನರ ವೀಕ್ಷಣೆಗಾಗಿ ನಿರ್ಮಿಸಲಾಗಿದ್ದ ಟೆಂಟ್‌ನ ಕಬ್ಬಿಣದ ಕಂಬ 11-ಕೆವಿ ವಿದ್ಯುತ್ ತಂತಿಯು ತಗುಲಿ ಹಲವರಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಅವರು ಹೇಳಿದರು.
ಸ್ಥಳೀಯ ಗ್ರಾಮಸ್ಥರು ಆರು ಗಾಯಾಳುಗಳನ್ನು ವಿಶ್ರಾಂಪುರಿಯ ಆಸ್ಪತ್ರೆಗೆ ಕರೆದೊಯ್ದರು, ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇನ್ನೂ ಮೂವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.