ಬೆಂಗಳೂರು,ಸೆ.21- ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಹಿನ್ನಲೆಯ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುವುದನ್ನು ಮನಗಂಡು ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವ್ಯವಸ್ಥೆ ಒದಗಿಸಿದೆ. ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ದಿನಾಂಕ ಸೆ.26, 27 ಹಾಗೂ 30ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.2 ಹಾಗೂ 5ರಂದು ವಿಶೇಷ ಬಸ್‌ಗಳ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದೆ.
ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಮೈಸೂರು ದಸರಾಕ್ಕೆ 610 ವಿಶೇಷ ಬಸ್
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಗಳನ್ನು ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‌ಗಳು ಸೇರಿದಂತೆ ಒಟ್ಟಾರೆ 610 ದಸರಾ ವಿಶೇಷ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ಮಾನ ನಿಲ್ದಾಣದಿಂದ ಮೈಸೂರಿಗೆ ಪ್ರೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯಕಲ್ಪಿಸಲಾಗಿರುತ್ತದೆ.
ಒಂದು ದಿನದ ವಿಶೇಷ ಪ್ರವಾಸ ಸಾರಿಗೆ
ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಂ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣದರ ವಯಸ್ಕರಿಗೆ: 450 ರೂ. ಮಕ್ಕಳಿಗೆ 300 ರೂ.)
ಜಲದರ್ಶಿನಿ: ಗೋಲ್ಡನ್‌ಟೆಂಪಲ್ (ಬೈಲಕುಪ್ಪೆ),ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣದರ ವಯಸ್ಕರಿಗೆ: 500 ರೂ. ಮತ್ತು ಮಕ್ಕಳಿಗೆ 350)
ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ,
ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ: 330 ರೂ. ಮತ್ತು ಮಕ್ಕಳಿಗೆ 225 ರೂ.)
ಈ ಪ್ಯಾಕೇಜ್‌ಗಳನ್ನು ಸೆ.27ರಿಂದ ಆ.7ರವರೆಗೆ ಕಲ್ಪಿಸಲಾಗಿದೆ.