Tuesday, September 23, 2025
Homeರಾಷ್ಟ್ರೀಯ | Nationalಪತ್ನಿ ಕೊಲೆ ವಿಚಾರವನ್ನು ಫೇಸ್‌ಬುಕ್ ಲೈವ್‌ನಲ್ಲಿ ಬಹಿರಂಗಗೊಳಿಸಿದ ಪತಿ

ಪತ್ನಿ ಕೊಲೆ ವಿಚಾರವನ್ನು ಫೇಸ್‌ಬುಕ್ ಲೈವ್‌ನಲ್ಲಿ ಬಹಿರಂಗಗೊಳಿಸಿದ ಪತಿ

Kerala Man Stabs Wife To Death While She was Bathing, Announces Murder On Facebook Live

ತಿರುವನಂತಪುರಂ, ಸೆ. 23: ಪತ್ನಿ ಸ್ನಾನ ಮಾಡುವಾಗ ಹಿಂದಿನಿಂದ ಬಂದ ಪತಿರಾಯ ಆಕೆಗೆ ಚೂರಿಯಲ್ಲಿ ಇರಿದು ಕೊಲೆ ಮಾಡಿ ನಂತರ ಫೇಸ್‌ಬುಕ್ ಲೈವ್‌ನಲ್ಲಿ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪೊಲೀಸರಿಗೆ ಶರಣಾಗುವ ಮೊದಲು, ಫೇಸ್‌ಬುಕ್‌ನಲ್ಲಿ ಲೈವ್ ವಿಡಿಯೋ ಮಾಡಿ, ತಾನು ಕ್ರೂರವಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುವ ಘಟನೆ ವಳಕ್ಕುಡುವಿನ ಪ್ಲಾಚೇರಿಯಲ್ಲಿ ನಡೆದಿದೆ.

- Advertisement -

ಕೊಲೆಯಾದ ಮಹಿಳೆಯನ್ನು 39 ವರ್ಷದ ಶಾಲಿನಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ 6.30 ರ ಸುಮಾರಿಗೆ ಶಾಲಿನಿ ಸ್ನಾನ ಮಾಡುತ್ತಿದ್ದಾಗ, ಆಕೆಯ ಪತಿ ಹರಾತ್ತನೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅವರ 19 ವರ್ಷದ ಮಗ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾನೆ.
ದೂರಿನ ಆಧಾರದ ಮೇಲೆ, ಆರೋಪಿ ಐಸಾಕ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 103(1) (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಂಪತಿ ನಡುವೆ ಈ ಹಿಂದೆಯೂ ಜಗಳಗಳು ನಡೆದಿದ್ದವು. ಶಾಲಿನಿ ಸ್ನಾನ ಮಾಡಲು ಹೋದಾಗ, ಆರೋಪಿಯು ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಕುತ್ತಿಗೆ, ಎದೆ ಮತ್ತು ಬೆನ್ನಿಗೆ ಆಳವಾದ ಗಾಯಗಳಾಗಿವೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ಹೆಂಡತಿಯನ್ನು ಕೊಂದ ಬಳಿಕ, ಐಸಾಕ್ ಫೇಸ್‌ಬುಕ್‌ನಲ್ಲಿ ಲೈವ್ ಬಂದು ತನ್ನ ಅಪರಾಧ ಒಪ್ಪಿಕೊಂಡಿದ್ದಾನೆ. ಈ ವೀಡಿಯೊ ಕಾಣಿಸಿಕೊಂಡ ತಕ್ಷಣ ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ನಂತರ ಐಸಾಕ್ ಪೊಲೀಸ್ ಠಾಣೆಗೆ ಹೋಗಿ ತನ್ನ ಹೆಂಡತಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ.

ಪೊಲೀಸ್‌ ತಂಡವು ಶಾಲಿನಿ ಮನೆಯಲ್ಲಿ ಮೃತಪಟ್ಟಿರುವುದನ್ನು ಕಂಡುಕೊಂಡಿತ್ತು. ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಪ್ರಕರಣದ ತನಿಖೆ ನಡೆಸುತ್ತಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಮಹಿಳೆ ಮತ್ತು ಆರೋಪಿ ಇಬ್ಬರ ಮೊಬೈಲ್ ಫೋನ್ ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News