ಬೆಳಗಾವಿ ಸೆ.23– ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ರಾತ್ರಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದ್ರಾಬಾದ್ಗೆ ಸಾಗಿಸುತ್ತಿದ್ದ ಸುಮಾರು 7 ಕ್ವಿಂಟಲ್ ಗೋಮಾಂಸ ಮತ್ತು ವಾಹನ ಸುಟ್ಟು ಭಸವಾಗಿದೆ.ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಗ್ರಾಮಸ್ಥರು ವಾಹನವನ್ನ ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಈ ವೇಳೆ ವಾಹನ ಪರಿಶೀಲಿಸಿದಾಗ ಗೋಮಾಂಸ ಇರುವುದು ಕಂಡುಬಂದಿದೆ. ಇದರಿಂದ ಕೊಂಪಗೊಂಡ ಗ್ರಾಮಸ್ಥರು ಚಾಲಕನನ್ನು ಹೊರಗೆಳೆದು ಥಳಿಸಿ, ಬಳಿಕ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಗವಾಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಐನಾಪುರ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದ್ದು, ಇಬ್ಬರು ಡಿಎಸ್ಪಿ, ನಾಲ್ಕು ಸಿಪಿಐ, ಎಂಟು ಪಿಎಸ್ಐ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.