ಬೆಂಗಳೂರು,ಸೆ.25- ಗೃಹಜ್ಯೋತಿ ಫಲಾನುಭವಿಗಳ ಸಂಖ್ಯೆ ಕಡಿತಕ್ಕೆ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರ ನಡೆಸಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಅರೋಪಿಸಿದ್ದಾರೆ.
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವ ಮೂಲಕ ಬಡವರ ಅನ್ನಭಾಗ್ಯಕ್ಕೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ ಈಗ 30 ದಿನಗಳ ಬದಲಾಗಿ, 40 ದಿನಗಳಿಗೆ ವಿದ್ಯುತ್ ಮೀಟರ್ ರೀಡಿಂಗ್ ತೆಗೆದುಕೊಳ್ಳುವ ಮೂಲಕ ಫಲಾನುಭವಿಗಳ ವಿದ್ಯುತ್ ಬಳಕೆಯ ಸರಾಸರಿ ಮಿತಿ ಏರಿಸಿ, ಗೃಹಿಜ್ಯೋತಿ ಯೋಜನೆಯಿಂದ ಅನರ್ಹಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಒಂದೊಂದೇ ಗ್ಯಾರೆಂಟಿ ಯೋಜನೆಯನ್ನು ಹಿಂಬಾಗಿಲ ಮೂಲಕ ಬಂದ್ ಮಾಡಲು ಹೊರಟಿದೆ ಎಂದು ಆರೋಪ ಮಾಡಿದ್ದಾರೆ.