Friday, October 3, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಬಳ್ಳಾಪುರ | Chikkaballapurದೊಡ್ಡಬಳ್ಳಾಪುರ : ನಡು ರಸ್ತೆಯಲ್ಲೇ ವ್ಯಕ್ತಿಯ ತಲೆಜಜ್ಜಿ ಕೊಲೆ

ದೊಡ್ಡಬಳ್ಳಾಪುರ : ನಡು ರಸ್ತೆಯಲ್ಲೇ ವ್ಯಕ್ತಿಯ ತಲೆಜಜ್ಜಿ ಕೊಲೆ

Doddaballapura: Man killed by smashing his head on the middle of the road

ದೊಡ್ಡಬಳ್ಳಾಪುರ,ಸೆ.25- ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲಿ ದುಷ್ಕರ್ಮಿಗಳು ಸಿಮೆಂಟ್‌ ಇಟ್ಟಿಗೆಯಿಂದ ತಲೆ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬುಲೆಟ್‌ ರಘು (38) ಎಂದು ಗುರುತಿಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳ ಗುಂಪು ರಘು ಮೇಲೆ ದಾಳಿ ಮಾಡಿ ಇಟ್ಟಿಗೆಯಿಂದ ತಲೆಜಜ್ಜಿ ಕೊಲೆಗೈದು ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್‌ ಸಾಧಿಕ್‌ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ವಯಕ್ತಿಕ ಕಾರಣಕ್ಕಾಗಿ ಪರಿಚಯಸ್ಥರೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೊಲೆಗೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

RELATED ARTICLES

Latest News