ಹಾಸನ,ಸೆ.28- ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಇರ್ಫಾನ್ (25), ತರುಣ್ (26), ರೇವಂತ್ (27) ಮೃತಪಟ್ಟ ಬೈಕ್ ಸವಾರರು. ಈ ಮೂವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಹೊಳೆನರಸೀಪುರ ತಾಲ್ಲೂಕಿನ ಎಡೇಗೌಡನಹಳ್ಳಿ ಬಳಿ ಎದುರಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಹೊಡೆದ ರಭಸಕ್ಕೆ ಬೈಕ್ ಉರಳಿಬಿದ್ದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮಧ್ಯೆ ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸಂಬಂಧ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.