ಚೆನ್ನೈ,ಸೆ.28– ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡಿರುವ ಕುಟುಂಬಗಳಿಗೂ ಚಿಕಿತ್ಸೆಗಾಗಿ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ವಿಜಯ್ ತಿಳಿಸಿದ್ದಾರೆ.
ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರೂರು ಪಟ್ಟಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಪ್ರತಿ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ ನೀಡುತ್ತೇನೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೂ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಇದೇ ವೇಳೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಘಟನೆ ಸಂಬಂಧ ಸರ್ಕಾರದ ವತಿಯಿಂದ ಪ್ರತಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ತಲಾ ಎರಡು ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.
Xನಲ್ಲಿ ಏನಿದೆ?
ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮೊಂದಿಗೆ ಹಂಚಿಕೊಳ್ಳುತ್ತೇನೆ.
ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ ಈ ಕ್ಷಣದಲ್ಲಿ, ನಿಮ ಕುಟುಂಬಕ್ಕೆ ಸೇರಿದವನಾಗಿ, ನಿಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.
ಅದೇ ರೀತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮೆಲ್ಲರ ಪ್ರೀತಿಪಾತ್ರರು ಬೇಗನೆ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ ಪ್ರೀತಿಪಾತ್ರರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ ತಮಿಳಗ ವೆಟ್ರಿ ಕಳಗಂ ನೀಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.