ಚೆನ್ನೈ,ಸೆ.28- ತಮಿಳುನಾಡಿನ ಕರೂರು ಪಟ್ಟಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ತನಿಖೆ ನಡೆ ಸುವಂತೆ ಕೋರಿ ಟಿವಿಕೆ ಪಕ್ಷ ಹೈಕೋರ್ಟ್ ಮೊರೆ ಹೋಗಿದೆ.
ಮದ್ರಾಸ್ ಹೈಕೋರ್ಟ್ನಲ್ಲಿ ತುರ್ತು ಅರ್ಜಿ ವಿಚಾರಣೆ ನಡೆಸಲು ಟಿವಿಕೆ ಪಕ್ಷದ ಪ್ರಮುಖರೊಬ್ಬರು ಮೇಲನವಿ ಸಲ್ಲಿಸಿದ್ದು, ಇದನ್ನು ವಿಚಾರಣೆ ನಡೆಸಲು ನ್ಯಾಯಾಲಯ ಸಮತಿಸಿದೆ.
ಪ್ರಕರಣವು ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯಲು ಮೇಲ್ನೋಟಕ್ಕೆ ಷಡ್ಯಂತ್ರವೇ ಕಾರಣ ಇರಬಹುದು. ರ್ಯಾಲಿ ನಡೆಯುವಾಗ ಪೊಲೀಸರು ಸಾರ್ವಜನಿಕರ ಮೇಲೆ ಏಕಾಏಕಿ ಲಾಠಿ ಚಾರ್ಜ್ ನಡೆಸಿದ್ದು ಏಕೆ? ಕೆಲವು ಕಡೆ ಕಲ್ಲು, ನೀರಿನ ಬಾಟಲ್ ಕೂಡ ಎಸೆಯಲಾಗಿದೆ. ಹೀಗಾಗಿ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳವುದಾಗಿ ತಿಳಿಸಿದೆ. ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಬಿಗಿ ಭದ್ರತೆ:
ಈ ನಡುವೆ ಚೆನ್ನೈನಲ್ಲಿರುವ ವಿಜಯ್ ಅವರ ನಿವಾಸಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭಾರೀ ಬಿಗಿಭದ್ರತೆಯನ್ನು ಕಲ್ಪಿಸಲಾಗಿದೆ.ಘಟನೆ ನಡೆದ ನಂತರ ವಿಜಯ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಬಿಗಿಭದ್ರತೆಯನ್ನು ನಿಯೋಜಿಸಲಾಗಿದೆ. ಇನ್ನು ಅವರ ಭದ್ರತೆಗಾಗಿಯೂ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.