Friday, October 3, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಹಾಸನ : ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಂಭೀರ ಗಾಯ

ಹಾಸನ : ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಂಭೀರ ಗಾಯ

Hassan: Mysterious explosion in a house, couple seriously injured

ಹಾಸನ,ಸೆ.30- ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲೂರು ತಾಲ್ಲೂಕಿನ ಹಳೆ ಆಲೂರಿನಲ್ಲಿ ನಡೆದಿದೆ.
ಸುದರ್ಶನ್‌ ಆಚಾರ್‌ (32), ಕಾವ್ಯ(27) ಗಾಯಗೊಂಡ ದಂಪತಿ.

ಮನೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ರಭಸಕ್ಕೆ ದಂಪತಿಗೆ ಗಂಭೀರವಾಗಿ ಗಾಯಗಳಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ದಂಪತಿಗೆ ಹಾಸನದ ಹಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನಿಸಲಾಗಿದೆ. ಮನೆಯಲ್ಲಿ ಯಾವ ವಸ್ತುವಿನಿಂದ ಸ್ಫೋಟಗೊಂಡಿದೆ ಎಂಬುದರ ಬಗ್ಗೆ ಆಲೂರು ಠಾಣೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

RELATED ARTICLES

Latest News