ಬೆಂಗಳೂರು, ಅ.1- ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.
ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ.
ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಇದರೊಂದಿಗೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮೆಯ ವಿಷಯವಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಮಹಿಳಾ ಪ್ರಯಾಣಿಕರಿಗೂ ಅಭಿನಂದನೆ ಸಲ್ಲಿಸಿದ್ದಾರೆ.