ಬೆಳಗಾವಿ,ಅ.4– ಖಡಕ್ ಗಲ್ಲಿಯ ಮೆಹಬೂಬ್ ಸುಭಾನಿ ದರ್ಗಾದ ಉರುಸ್ ಮೆರವಣಿಗೆಯ ಸಮಯದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಅನುಮತಿ ನೀಡಿದ ದಾರಿ ಬಿಟ್ಟು ಬೇರೆ ಮಾರ್ಗದಲ್ಲಿ ಮೆರವಣಿಗೆ ನಡೆಸಿ ಐ ಲವ್ ಮುಹಮದ್ ಘೋಷಣೆ ಕೂಗಿದಾಗ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಇದರಿಂದ ಕೆರಳಿ ಕಲ್ಲು ತೂರಾಟ ನಡೆಸಲಾಗಿದೆ.
ಘಟನೆಯಿಂದ ಬೆಳಗಾವಿ ನಗರ ಉದ್ವಿಗ್ನಗೊಂಡಿದೆ.ಸ್ಥಳಕ್ಕೆ ಬಂದ ಪೊಲೀಈಸರು ಪರಿಸ್ಥಿತಿ ನಿಯಂತ್ರಿಸಿದ್ದರೆ.ಮೆರವಣಿಗೆಗೆ ಅವಕಾಶವಿಲ್ಲದ ಪ್ರದೇಶವಾದ ಖಡಕ್ ಗಲ್ಲಿಗೆ ಕೆಲವರು ನುಗ್ಗಿದ್ದರಿ ಇದಕ್ಕೆ ಅಲ್ಲಿನ ನಿವಾಸಿಗಳು ಮಾರ್ಗವನ್ನು ಏಕೆ ಬದಲಾಯಿಸಲಾಗಿದೆ ಎಂದು ಪ್ರಶ್ನಿಸಿದರು ಮತ್ತು ಘೋಷಣೆಗೆ ಆಕ್ಷೇಪ ವ್ಯಕ್ತಪಡಿಸಿದರು.
ಇದರಿಂದ ಘರ್ಷಣೆ ಉಂಟಾಗಿ ಉದ್ವಿಘ್ನ ಸನ್ನಿವೇಶ ಸೃಷ್ಠಿಯಾಗಿಕೆಲವರು ಕಲ್ಲು ತೂರಾಟ ನಡೆಸಿದ್ದಾರೆ.ಪೊಲೀಸ್ ಸಿಬ್ಬಂದಿ ಕೂಡಲೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರೆ
ಗುಂಪುಗಳನ್ನು ಚದುರಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಭೇಟಿ ನೀಡುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
ಏಕಾಏಕಿ ಮೆರವಣಿಗೆ ಮಾಡಿದವರು ಮತ್ತು ಕಲ್ಲು ತೂರಿದ್ದಾರೆ ಕೆಲವರು ತಲ್ಚಾರ್ ಕೂಡ ತೋರಿಸಿ ಬೆದರಿಕೆ ಹಾಕಿದ್ದು ಅವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಸ್ಥಳೀಯರು, ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಜನರ ನಡುವೆ ಘರ್ಷಣೆ ನಡೆದಿದೆ. ಒಂದು ಧಾರ್ಮಿಕ ಕಾರ್ಯಕ್ರಮ ಇತ್ತು. ಒಂದು ರೂಟ್ ಫಿಕ್‌್ಸಇದೆ, ಅದನ್ನ ಬಿಟ್ಟು ಬೇರೆ ರೂಟ್‌ನಲ್ಲಿ ಬಂದಿದ್ದಾರೆ.
ಸ್ಥಳೀಯರು ಕಲ್ಲು ತೂರಾಟ ಆಗಿದೆ ಅಂತಾ ದೂರು ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಯಾರಿಗೂ ಗಾಯ ಆಗಿಲ್ಲ, ಎರಡು ಕೋಮಿನ ಹಿರಿಯರು ಪರಿಸ್ಥಿತಿ ಕೂಡಲೇ ಸರಿಪಡೆಸಿದ್ದಾರೆ ಎಂದು ಹೇಳಿದರು. ಘಟನೆ ಸಂಬಂಧ ಸದ್ಯ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.ಕಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.