ಬಾಗಲಕೋಟೆ,ಅ.4– ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಕೆಲಸ ಮುಗಿಸಿ ವಾಪಸ್ ಮನೆಗೆ ತೆಳುವಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದ ದಾನಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ.
ಬಾಗಲಕೋಟೆ ತಾಲೂಕಿನ ರಾಂಪೂರ ಸರ್ಕಾರಿ ಆಶ್ರಯ ಕಾಲೋನಿ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಅವರು ನಿನ್ನೆ ಸಂಜೆ ಕೆಲಸ ಮುಗಿಸಿ ರಾತ್ರಿ ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಗಣತಿ ಕಾರ್ಯದ ಒತ್ತಡದಲ್ಲಿದ್ದ ದಾನಮ ಮಗ ವಿಕಾಸ್ ಬೈಕ್ ಹೋಗುವಾಗ ಹದಗೆಟ್ಟ ರಸ್ತೆಯಿಂದಾಗು ಆಯತಪ್ಪಿ ವಾಹನದಿಂದ ಜಾರಿ ಕೆಳಗೆ ಬಿದ್ದಿದ್ದಾರೆ.ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.