ಬೆಂಗಳೂರು,ಅ.7– ರಾಜ್ಯದಲ್ಲಿ ಐ ಲವ್ ಮುಹಮದ್ ಎಂಬ ಪೋಸ್ಟರ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಹಿತೇಂದ್ರ ಅವರು ಎಚ್ಚರಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರ್ನಾಲ್ಕು ಜಿಲ್ಲೆಗಳಲ್ಲಿ ಹಾಕಿದ್ದ ಪೋಸ್ಟರ್ಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಅಲ್ಲದೇ ಮತ್ತೆ ಹಾಕದಂತೆ ಸೂಚನೆ ನೀಡಿದ್ದೇವೆ ಎಂದರು.
ಐ ಲವ್ ಮುಹಮದ್ ಎಂಬ ಪೋಸ್ಟರ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದೆಂತೆ ರಾಜ್ಯದಲ್ಲಿ 2 ಪ್ರಕರಣಗಳು ದಾಖಲಾಗಿವೆ. ದಾವಣಗೆರೆಯಲ್ಲಿ 8 ಮಂದಿಯನ್ನು ಹಾಗೂ ಬೆಳಗಾವಿಯಲ್ಲಿ 11 ಮಂದಿಯನ್ನು ಬಂಧಿಸಿ ಕ್ರಮಕೈಗೊಂಡಿದ್ದೇವೆ ಎಂದರು.ಕಲ್ಬುರ್ಗಿಯಲ್ಲಿ ಪೋಸ್ಟರ್ ಹಾಕಿದ್ದನ್ನು ತೆರವುಗೊಳಿಸಿದ್ದೇವೆ.
ಈ ರೀತಿಯ ಘಟನೆ ಮರು ಕಳಿಸದಂತೆ, ಯಾವುದೇ ಅಹಿತರ ಘಟನೆ ನಡೆಯದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದ್ದು, ಭದ್ರತೆ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮರ್ಪಕವಾಗಿದೆ ಎಂದರು.ಯಾರೇ ಆದರೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.