ಬೆಂಗಳೂರು, ಅ.8- ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದ ಆರೋಪಿಯನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು, ಗಡೀಪಾರು ಮಾಡಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಕೇಶ್‌ಕಿಶೋರ್ ಎಂಬ ವಕೀಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ಕುಳಿತಿದ್ದ ಪೀಠದತ್ತ ಶೂ ಎಸೆಯಲು ಯತ್ನಿಸಿರುವುದು ಪ್ರಜಾಪ್ರಭುತ್ವಕ್ಕೆ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾಡಿರುವ ಅಪಚಾರವಾಗಿದೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನೋಹರ್ ಆಗ್ರಹಿಸಿದರು.
ಇತಹ ಕೃತ್ಯವೆಸಗಿದ ವ್ಯಕ್ತಿಯನ್ನು ಬಂಧಿಸಿ, ಬಿಡುಗಡೆ ಮಾಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಈ ವ್ಯಕ್ತಿ ಮಾಡಿರುವ ಕೃತ್ಯ ದೇಶದ ಪ್ರತಿಯೊಬ್ಬರಿಗೂ ಮಾಡಿರುವ ಅವಮಾನವಾಗಿದೆ. ಈ ಕೃತ್ಯವನ್ನು ಖಂಡಿಸಲು ಕೇಂದ್ರ ಸರ್ಕಾರ ಮುಂದಾಗದಿರುವುದು ದುರದೃಷ್ಟಕರ ಘಟನೆ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿಯವರು ಈ ಘಟನೆಯನ್ನು ಖಂಡಿಸಿದ್ದಾರೆ. ಆದರೆ ಯಾವ ಬಿಜೆಪಿ ಮುಖಂಡರೂ ಈ ಘಟನೆಯನ್ನು ಖಂಡಿಸಿಲ್ಲ ಎಂದು ಹೇಳಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸುಧಾಕರರಾವ್, ಪ್ರಕಾಶ್, ಹೇಮರಾಜು, ಕುಶಾಲ್ ಅರವೇಗೌಡ, ಪುಟ್ಟರಾಜು, ಉಮೇಶ್, ನವೀನ್ ಸುಂಕದಕಟ್ಟೆ, ಚಿನ್ನಿ ಪ್ರಕಾಶ್, ಓಬಲೇಶ್, ಆನಂದ್, ಪ್ರವೀಣ್, ಪವನ್, ಅಜಯ್, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.