Friday, November 22, 2024
Homeರಾಜ್ಯಕಾಂತರಾಜು ಆಯೋಗದ ವರದಿಯಲ್ಲಿ ಲೋಪ, ನೈಜ ವರದಿ ತಯಾರಿಕೆಗೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ

ಕಾಂತರಾಜು ಆಯೋಗದ ವರದಿಯಲ್ಲಿ ಲೋಪ, ನೈಜ ವರದಿ ತಯಾರಿಕೆಗೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ


ಬೆಂಗಳೂರು,ನ.26- ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕೆಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕರಾದ ಆಡಿಟರ್ ನಾಗರಾಜ್ ಯಲಚವಾಡಿ ಒತ್ತಾಯಿಸಿದ್ದಾರೆ. ಪ್ರತಿ ಮನೆಗೂ ಹೋಗಿ ಸರ್ವೆ ಮಾಡುವುದರ ಮೂಲಕ ನೈಜ ವರದಿಯನ್ನು ಸಿದ್ದಪಡಿಸಲು ಆದೇಶಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಳೆದ 50 ವರ್ಷಗಳಿಂದ ಮೀಸಲಾತಿ ಸೌಲಭ್ಯ ಪಡೆಯುತ್ತಿರುವ ಸಮುದಾಯ ಬಗ್ಗೆ ನಾವು ಯಾವತ್ತೂ ವಿರೋಧವನ್ನು ವ್ಯಕ್ತಪಡಿಸಿಲ್ಲ. ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಿದ್ದಪಡಿಸಲಾದ ವರದಿಯು 8 ವರ್ಷಗಳಷ್ಟು ಹಳೆಯದಾಗಿದ್ದು, ವರದಿಯ ಬಗ್ಗೆ ಹಲವಾರು ಸಂಶಯಗಳು ವ್ಯಕ್ತವಾಗಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡುವುದರ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಎಲ್ಲಾ ಸಮುದಾಯದ ಜನಾಂಗಕ್ಕೂ ಕೂಡ ಮೀಸಲಾತಿ ಸೌಲಭ್ಯ ದೊರಕಬೇಕೆಂಬ ಆಶಯವಿದೆ. ಅದರ ವಿಚಾರವಾಗಿ ಅಹಿಂದ ರಾಮಚಂದ್ರಪ್ಪರು ತಿಳಿದುಕೊಳ್ಳದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಹೇಳಿರುವುದು ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮಾಜದ ವ್ಯಕ್ತಿ ಜನಪ್ರತಿನಿ„ಯಾದರೂ ಕೂಡ ಅವರವರ ಸಮುದಾಯಕ್ಕೆ ಸಂಬಂಧಪಟ್ಟ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ , ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಹೊಂದಿರುತ್ತಾರೆ. ಆದರೆ ಉಪಮುಖ್ಯಮಂತ್ರಿ ರಾಜೀನಾಮೆ ನೀಡಿಬೇಕೆಂದು ಒತ್ತಾಯಿಸುವುದು ಸರಿಯಾದ ಮಾರ್ಗವಲ್ಲ ಎಂದಿದ್ದಾರೆ.

RELATED ARTICLES

Latest News