ಚೆನ್ನೈ, ಅ.9- ಕಲಬೆರಕೆ ಕೆಮಿನ ಸಿರಪ್ ಸೇವಿಸಿ 20 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಸ್ರೇಸನ್ ಫಾರ್ಮಾದ ಮಾಲೀಕರನ್ನು ಇಂದು ಮುಂಜಾನೆ ಮಧ್ಯಪ್ರದೇಶ ಪೊಲೀಸರು ಚೆನ್ನೈ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಮಧ್ಯಪ್ರದೇಶ ಪೊಲೀಸರು ಮತ್ತು ಚೆನ್ನೈ ಪೊಲೀಸರ ತಂಡಗಳು ಫಾರ್ಮಾ ಮಾಲೀಕ ರಂಗನಾಥನ್ ಅವರನ್ನು ಪತ್ತೆಹಚ್ಚಲು ಕಳೆದ ಹುಡುಕಾಟ ಆರಂಭಿಸಿತ್ತು.
ಅವರ ಕಂಪನಿಯು ತಯಾರಿಸಿದ ಕೋಲ್ಡ್ರಿಫ್ ಕೆಮಿನ ಸಿರಪ್ ದೇಶದ ಅನೇಕ ರಾಜ್ಯಗಳಲ್ಲಿ 20 ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಮಧ್ಯರಾತ್ರಿಯ ಕಾರ್ಯಾಚರಣೆಯ ನಂತರ ಅವರನ್ನು ನಗರದಲ್ಲಿ ಬಂಧಿಸಿ ವಿಚಾರಣೆಗಾಗಿ ಸುಂಗುವರ್ಚತ್ರಂ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯದ ಕಾನೂನು ಪ್ರಕ್ರಿಯೆ ನಂತರ ಮಧ್ಯಪ್ರದೇಶ ಪೊಲೀಸರು ಆರೋಪಿಯನ್ನು ವಿವರವಾದ ತನಿಖೆಗಾಗಿ ಅವರ ರಾಜ್ಯಕ್ಕೆ ಕರೆದೊಯ್ಯುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಕ್ರಮಕ್ಕೆ ಮುಂದಾಗಿದೆ.