ಬೆಂಗಳೂರು,ಅ.9-ಸಿಟಿ ಸಿವಿಲ್ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಆರೋಪಿ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾನೆ.ಪೋಸ್ಕೋ ಪ್ರಕರಣದ ಆರೋಪಿ ಗೌತಮ್ ಆತಹತ್ಯೆಗೆ ಶರಣಾದವನು.
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಗೌತಮ್ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಿದ್ದ ಪೊಲೀಸರು ಇಂದು ಮಧ್ಯಾಹ್ನ ವಿಚಾರಣೆಗಾಗಿ ಪರಪ್ಪನ ಅಗ್ರಹಾರದಿಂದ ನ್ಯಾಯಾಲಯಕ್ಕೆ ಕರೆತಂದಿದ್ದರು.
ಸಿಟಿ ಸಿವಿಲ್ ಕೋರ್ಟ್‌ಗೆ ಪೊಲೀಸರು ಆರೋಪಿ ಗೌತಮ್‌ನನ್ನು ಕರೆತಂದಿದ್ದಾಗ ಪೊಲೀಸರಿಂದ ತಪ್ಪಿಸಿಕೊಂಡು ಏಕಾಏಕಿ ಕೋರ್ಟ್‌ನ 5 ನೇ ಮಹಡಿಯಿಂದ ಜಿಗಿದಿದ್ದರಿಂದ ಗಂಭೀರ ಗಾಯಗೊಂಡನು.
ತಕ್ಷಣ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಸುದ್ದಿ ತಿಳಿದು ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.