Saturday, October 11, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಕೊಂದ ಕಾಮುಕನಿಗೆ ಗುಂಡೇಟು

ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಕೊಂದ ಕಾಮುಕನಿಗೆ ಗುಂಡೇಟು

man who rape and Murderd girl was shot by police

ಮೈಸೂರು,ಅ.10– ಹೊಟ್ಟೆಪಾಡಿಗಾಗಿ ಬಲೂನ್‌ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಹಾರಿಸಿದ ಗುಂಡೇಟಿನಿಂದ ಗಾಯಗೊಂಡು ಕೆಆರ್‌ಆಸ್ಪತ್ರೆಯಲ್ಲಿ ಆರೋಪಿ ಕಾರ್ತಿಕ್‌ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈತ ಮೈಸೂರಿನ ಸಿದ್ದಲಿಂಗಪುರ ನಿವಾಸಿ. ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಕಲ್ಬುರ್ಗಿಯಿಂದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಬಂದು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಜೋಪಡಿ ಹಾಕಿಕೊಂಡು ತಂಗಿದ್ದಾರೆ. ಮೊನ್ನೆ ಚಾಮುಂಡೇಶ್ವರಿ ದೇವಾಲಯದ ತೆಪ್ರೋತ್ಸವ ಮುಗಿಸಿ, ನಿನ್ನೆ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು.

ನಿನ್ನೆ ಮುಂಜಾನೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಬೆಳಗ್ಗೆ 6.30 ರ ಸುಮಾರಿನಲ್ಲಿ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಮೈಮೇಲೆ ಸರಿಯಾಗಿ ಬಟ್ಟೆ ಇರಲಿಲ್ಲ. ಹಾಗಾಗಿ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಜರ್‌ಬಾದ್‌ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸಿಸಿಟಿವಿ ಆಧಾರದ ಮೇಲೆ ಹಂತಕನ ಚಹರೆ ಆಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಮೈಸೂರು ಬಸ್‌‍ ನಿಲ್ದಾಣದಿಂದ ಕೊಳ್ಳೇಗಾಲ ಬಸ್‌‍ ಹತ್ತಿ ಹೋಗಿರುವುದು ಗೊತ್ತಾಗಿದೆ.ತಕ್ಷಣ ಕೊಳ್ಳೇಗಾಲಕ್ಕೆ ತೆರಳಿ ಶೋಧ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತರುತ್ತಿದ್ದಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ತಕ್ಷಣ ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್ ಟೇಬಲ್‌ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಆ ವೇಳೆ ಸಬ್‌ ಇನ್‌್ಸಪೆಕ್ಟರ್‌ ಜೈಕೀರ್ತಿ ಅವರು ತಕ್ಷಣ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ.ಪೊಲೀಸರ ಮಾತಿಗೆ ಕಿವಿಗೊಡದೇ ಮತ್ತೆ ಪೊಲೀಸ್‌‍ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗ ಸಬ್‌ ಇನ್‌್ಸಪೆಕ್ಟರ್‌ ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿದ್ದು ಆತ ಕುಸಿದು ಬಿದ್ದಿದ್ದಾನೆ.ಆರೋಪಿ ಕಾರ್ತಿಕ್‌ ನನ್ನು ಸುತ್ತುವರೆದು ವಶಕ್ಕೆ ಪಡೆದು ಕೆ.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಆಯುಕ್ತರ ಭೇಟಿ:
ಆಸ್ಪತ್ರೆಗೆ ನಗರ ಪೊಲೀಸ್‌‍ ಕಮಿಷನರ್‌ ಸೀಮಾ ಲಾಟ್ಕರ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್‌, ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಆರೋಪಿ ಕಾರ್ತಿಕ್‌ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್‌ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಆರೋಪಿ ಕಾರ್ತಿಕ್‌ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

RELATED ARTICLES

Latest News