Homeರಾಜ್ಯಮಲೈ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಮಲೈ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Leopard spotted again on Malai Mahadeshwar hill

ಹನೂರು, ಫೆ.21-ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.

ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದ ಐದನೆ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರೊಬ್ಬರು ತಮ ಮೊಬೈಲ್‌ನಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯವನ್ನು ಸೆರೆಹಿಡಿದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದ್ದು, ಚಿರತೆ ಸೆರೆಗಾಗಿ ಬೋನುಗಳನ್ನು ಕೂಡ ಇರಿಸಲಾಗಿದೆ.

ಶಿವರಾತ್ರಿ ಜಾತ್ರಾ ಮಹೋತ್ಸವ ಮುಕ್ತಾಯವಾದ ಹಿನ್ನೆಲೆಯಲ್ಲಿ ಪಾದಯಾತ್ರಿಗಳ ಸಂಖ್ಯೆ ಕಡಿಮೆಯಾಗಿದ್ದು, ಭಕ್ತರು ಆದಷ್ಟು ಸಾರಿಗೆ ಬಸ್‌‍ಗಳಲ್ಲಿ ಪ್ರಯಾಣಿಸುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ.

RELATED ARTICLES
spot_img

Latest News