ಬೆಂಗಳೂರು, ಅ.13- ಒಂದು ವಾರದ ಚಿಕಿತ್ಸೆಯ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದುದರಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರು, ಈಗ ಸಂಪೂರ್ಣವಾಗಿ ಚೇತರಿಕೆ ಕಂಡು ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಕೆಲ ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಧೂಳಿರುವ ವಾತಾವರಣಕ್ಕೆ ಹೋಗಬಾರದು ಮತ್ತೇ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕು ಎಂದು ದೇವೇಗೌಡರಿಗೆ ಸಲಹೆ ನೀಡಿದ್ದಾರೆ.